ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 31 ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡಿದ್ದಾರೆ.
ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅವರನ್ನು ಬಂಧಿಸಲಾಗಿತ್ತು. 20 ಪೊಲೀಸ್ ಸಿಬ್ಬಂದಿ ಭದ್ರತೆಯೊಂದಿಗೆ ಬಾಂಗ್ಲಾ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ.
ಬೆಂಗಳೂರು ರೈಲ್ವೆ ಟರ್ಮಿನಲ್ ಮೂಲಕ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಪಶ್ಚಿಮ ಬಂಗಾಳ ಗಡಿಭಾಗದಿಂದ ಬಾಂಗ್ಲಾದೇಶಕ್ಕೆ ಪೊಲೀಸರು ಕಳುಹಿಸಿದ್ದಾರೆ.
ಬೆಂಗಳೂರಿನಲ್ಲಿ ಬಂಧಿತರಾಗಿದ್ದ 31 ಮಂದಿ ಬಾಂಗ್ಲಾ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಪೊಲೀಸ್ ಭದ್ರತೆಯೊಂದಿಗೆ ಅವರನ್ನು ಬೆಂಗಳೂರಿನ ರೈಲ್ವೆ ಟರ್ಮಿನಲ್ ಮೂಲಕ ಕರೆದುಕೊಂಡು ಹೋಗಲಾಗಿದೆ. ಪಶ್ಚಿಮ ಬಂಗಾಳದ ಗಡಿಯ ಮೂಲಕ ಬಾಂಗ್ಲಾಗೆ ಪೊಲೀಸರು ಕಳುಹಿಸಿದ್ದಾರೆ.


