ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಗುರುವಾರ ತಮಿಳುನಾಡಿನಲ್ಲಿ 31ನೇ ದಕ್ಷಿಣ ವಲಯ ಮಂಡಳಿ ಸಭೆ ನಡೆಯಲಿದೆ.
ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ತಮಿಳುನಾಡು ಮುಖ್ಯಮಂತ್ರಿ ವಿಜಯ್, ಪುದುಚೇರಿ ಸಿಎಂ ರಂಗಸ್ವಾಮಿ ಭಾಗವಹಿಸಲಿದ್ದಾರೆ.
ರಾಜ್ಯಗಳ ನಡುವೆ ಇರುವ ಬಿಕ್ಕಟ್ಟನ್ನು ಮಾತುಕತೆ ಮೂಲಕ ಬಗೆಹರಿಸಿ ದಕ್ಷಿಣ ಭಾರತ ರಾಜ್ಯಗಳ ಅಭಿವೃದ್ಧಿ ಕುರಿತಂತೆ ಸಭೆ ನಡೆಯಲಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ, ಮೇಕೆದಾಟು ವಿವಾದ ಹಾಗೂ ಉಳಿದ ರಾಜ್ಯಗಳ ನಡುವಿನ ಗಡಿ, ನೀರಾವರಿ ಸೇರಿದಂತೆ ಇತರ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.


