Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಥೈಲ್ಯಾಂಡ್‌'ನಲ್ಲಿ ಭೀಕರ ಗುಂಡಿನ ದಾಳಿ : ಮಕ್ಕಳು ಸೇರಿದಂತೆ 34 ಜನರು ಸಾವು 

Advertisement
ಥೈಲ್ಯಾಂಡ್‌'ನ ಸಾಂಗ್ಖ್ಲಾ ಪ್ರಾಂತ್ಯದ ಶಾಲೆಯ ಮೇಲೆ ಬಂದೂಕುಧಾರಿಯೊಬ್ಬ ದಾಳಿ ನಡೆಸಿ 22 ಮಕ್ಕಳು ಸೇರಿದಂತೆ 34 ಜನರನ್ನು ಕೊಂದಿದ್ದಾನೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, 18 ವರ್ಷದ ಯುವಕನೊಬ್ಬ M-4 ಬಂದೂಕಿನಿಂದ ಗುಂಡು ಹಾರಿಸಿದ್ದಾನೆ.

ಪ್ರತ್ಯಕ್ಷದರ್ಶಿಗಳು ಹೇಳುವಂತೆ ಆ ವ್ಯಕ್ತಿಯ ಸಹೋದರಿ ಅದೇ ಶಾಲೆಯಲ್ಲಿ ಓದುತ್ತಿದ್ದಳು. ಬಂದೂಕನ್ನು ಹಿಡಿದಿದ್ದ ಆ ವ್ಯಕ್ತಿ ಕೆಲವು ದಿನಗಳ ಹಿಂದೆ ತನ್ನ ಸಹೋದರಿಯ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದ ಶಿಕ್ಷಕನನ್ನ ಹುಡುಕುತ್ತಿದ್ದ. ಪೊಲೀಸರು ಈಗ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಶಾಲೆಯನ್ನು ಸೀಲ್ ಮಾಡಲಾಗಿದೆ ಮತ್ತು ಆ ಪ್ರದೇಶದಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಗುಂಡಿನ ದಾಳಿಯ ನಂತರ ದಾಳಿಕೋರ ಹಲವಾರು ಮಕ್ಕಳು ಮತ್ತು ಶಿಕ್ಷಕರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದ. ಶಾಲೆಯೊಳಗೆ ಇನ್ನೂ ಹಲವಾರು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ವಿಶೇಷ ಪಡೆಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದವು.

ಪೊಲೀಸರು ಇಡೀ ಶಾಲೆಯನ್ನು ಸುತ್ತುವರೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ದಾಳಿಕೋರನ ಗುರುತು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ