ಬೆಂಗಳೂರು: ಊಟದಲ್ಲಿ ಬಳಸಿ ಬಿಸಾಡುವ ಕರಿಬೇವಿನ ಸೊಪ್ಪಿನಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಮೂಲೆಗುಂಪಾಗಿದ್ದಾರೆ. ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಯೋಜನೆ ರೂಪಿಸುತ್ತಿದ್ದಾರೆ.
ಇಬ್ಬರ ನಡುವೆ ಅಧಿಕಾರಕ್ಕಾಗಿ ಗಲಾಟೆಯನ್ನು ಗಮನಿಸಿದರೆ ರಾಜ್ಯಕ್ಕೆ ಶೀಘ್ರವೇ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok )ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿದ್ದು ಕಾಂಗ್ರೆಸ್ ಪಕ್ಷದವರೇ. ಈ ವಿಚಾರವನ್ನು ಸ್ವತಃ ಸಿದ್ದರಾಮಯ್ಯ ಅವರ ಪುತ್ರನೇ ಹೇಳಿಕೊಂಡು ಬರುತ್ತಿದ್ದಾರೆ. ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರಿಗೂ ವಿಶೇಷ ತನಿಖಾ ತಂಡ (ಎಸ್ಐಟಿ) ಕ್ಲೀನ್ ಚಿಟ್ ನೀಡಲಿದೆ' ಎಂದರು.


