Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

4.50 ಲಕ್ಷ ಬಿಪಿಎಲ್ ಕಾರ್ಡ್'ಗಳು ರದ್ದು

Advertisement
ಬೆಂಗಳೂರು : ಆಹಾರ ಇಲಾಖೆಯು ರಾಜ್ಯಾದ್ಯಂತ ಬರೋಬ್ಬರಿ 7,76,206 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿದೆ.

ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 4.50 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ.ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.

ರಾಜ್ಯಾದ್ಯಂತ ಆಹಾರ ಇಲಾಖೆ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ 14.50 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇವರು ಅಧಿಕ ಆದಾಯ ಹೊಂದಿದವರು ಮತ್ತು ಕುಟುಂಬ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ.

ಮೃತಪಟ್ಟವರ ಹೆಸರು ಮತ್ತು ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಬಳಸಿ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯುತ್ತಿರುವ ಅಘಾತಕಾರಿ ಸಂಗತಿಯೂ ಬೆಳಕಿಗೆ ಬಂದಿದೆ. ಹೀಗಾಗಿ ಈ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ನಿಂತಿದೆ.

ಇದೊಂದೇ ಯೋಜನೆಯಿಂದ ತಿಂಗಳಿಗೆ ಸುಮಾರು 90 ಕೋಟಿ ಉಳಿತಾಯವಾಗುತ್ತದೆ. ಈ ಫಲಾನುಭವಿಗಳಿಗೆ ತಿಂಗಳಿಗೆ 72.50 ಲಕ್ಷ ಕ್ವಿಂಟಲ್ ಪಡಿತರ ವಿತರಿಸಲಾಗುತ್ತಿತ್ತು. ಇದಕ್ಕೆ ವೆಚ್ಚವಾಗುತ್ತಿದ್ದ ಅಂದಾಜು 22 ಕೋಟಿ ರೂಪಾಯಿ ಉಳಿತಾಯವಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ