ಬೆಂಗಳೂರು : ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಪತಿ ತನ್ನ 4 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ಮಹಿಳೆಯನ್ನು ಸ್ವಪ್ನಾ ಹಾಗೂ ಪತಿಯನ್ನು ಮನೋಜ್ ಎಂದು ಗುರುತಿಸಲಾಗಿದೆ.ಈ ಘಟನೆ ಕುರಿತು ಅಧಿಕೃತ ಪೊಲೀಸ್ ಮಾಹಿತಿ ಇನ್ನಷ್ಟೇ ನಿರೀಕ್ಷೆಯಲ್ಲಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮನೋಜ್ ಮನೆಯಲ್ಲಿದ್ದ ನಾಯಿಯನ್ನು ಕಟ್ಟುವ ಬೆಲ್ಟ್‌ನಿಂದ ಪತ್ನಿ ಸ್ವಪ್ನಾ ಅವರ ಕುತ್ತಿಗೆ ಬಿಗಿದು ಹತ್ಯೆಗೈದಿದ್ದಾನೆ ಎನ್ನಲಾಗಿದೆ.
ಬಳಿಕ ಮನೆಯಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.


