ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 4 ಸಾವಿರ ಹುದ್ದೆಗಳ ಭರ್ತಿಗೆ ಕೂಡಲೇ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಇಲಾಖೆಯಲ್ಲಿ 25,540 ಮಂಜೂರಾದ ಹುದ್ದೆಗಳಿವೆ. ಇವುಗಳಲ್ಲಿ 8770 ಖಾಲಿ ಹುದ್ದೆಗಳಿವೆ.ಇವುಗಳಲ್ಲಿ 268 ಎ ವೃಂದದ ಹುದ್ದೆಗಳು, 1079 ಬಿ ವೃಂದದ ಹುದ್ದೆಗಳು ಖಾಲಿ ಇವೆ. 5294 ಸಿ ವೃಂದದ ಹುದ್ದೆಗಳು ಹಾಗೂ 2129 ಡಿ ವೃಂದದ ಖಾಲಿ ಹುದ್ದೆಗಳಿವೆ ಎಂದು ಹೇಳಿದ್ದಾರೆ.
ಖಾಲಿ ಹುದ್ದೆಗಳಲ್ಲಿ ಮೊದಲ ಹಂತದಲ್ಲಿ 4000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸಿ ಮತ್ತು ಡಿ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಲಿದೆ.
1,400 ಹುದ್ದೆಗಳ ಭರ್ತಿಗೆ ಈಗಾಗಲೇ ಅನುಮತಿ ನೀಡಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.

