ಬೆಂಗಳೂರು: ಸಚಿವ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ನೀಡಿದ್ದಾರೆ. ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್ ನೀಡುವ ಮೂಲಕ ಸುಮಾರು ₹444 ಕೋಟಿ ಅಕ್ರಮ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿರುವ ಟೆಂಡರ್ ಪ್ರಕ್ರಿಯೆಯಲ್ಲಿ ಭಾರಿ ಗೋಲ್‌ಮಾಲ್ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಪ್ರಕರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರ ಜೊತೆಗೆ ಐಎಎಸ್ ಅಧಿಕಾರಿ ಭೂಬಾಲನ್ ಸೇರಿದಂತೆ ಇತರರ ವಿರುದ್ಧವೂ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.
KSDC, KSWAN ಟೆಂಡರ್‌ಗಳಲ್ಲಿ ಅಕ್ರಮ ಆರೋಪ
ಡಿಪಿಎಆರ್ (ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಇಲಾಖೆ) ಅಧೀನದಲ್ಲಿರುವ ಕರ್ನಾಟಕ ಸ್ಟೇಟ್ ಡೇಟಾ ಸೆಂಟರ್ (KSDC) ಹಾಗೂ ಕರ್ನಾಟಕ ಸ್ಟೇಟ್ ವೈಡ್ ಏರಿಯಾ ನೆಟ್‌ವರ್ಕ್ (KSWAN) ವಿಭಾಗಗಳಿಗೆ ಸಂಬಂಧಿಸಿದ ಟೆಂಡರ್‌ಗಳಲ್ಲಿ ಅಕ್ರಮ ನಡೆದಿದೆ ಎಂದು ಎನ್.ಆರ್. ರಮೇಶ್ ಆರೋಪಿಸಿದ್ದಾರೆ.


