Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಸ್ಪಿನ್ನರ್ ದಿಗ್ವೇಶ್ ರಾಥಿ ಒಂದು ಪಂದ್ಯದಿಂದ ಅಮಾನತು

Advertisement

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಅತೀ ಹೆಚ್ಚು ಬಾರಿ ದಂಡ ಕಟ್ಟಿದ್ದು ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ. ನೋಟ್ ಬುಕ್​ ಸೆಲೆಬ್ರೇಷನ್​ನೊಂದಿಗೆ ಮೈದಾನದಲ್ಲಿ ಸಂಚಲನ ಸೃಷ್ಟಿಸಿದ್ದ ದಿಗ್ವೇಶ್ ಈವರೆಗೆ ಮೂರು ಬಾರಿ ದಂಡ ಕಟ್ಟಿದ್ದಾರೆ. ಅಲ್ಲದೆ ಇದೀಗ ಒಂದು ಪಂದ್ಯದಿಂದ ಅಮಾನತುಗೊಂಡಿದ್ದಾರೆ.



ಇಂಡಿಯುನ್ ಪ್ರೀಮಿಯರ್ ಲೀಗ್​ನಲ್ಲಿ ಅನುಚಿತ ವರ್ತನೆಯಿಂದಲೇ ಗಮನ ಸೆಳೆದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಪಿನ್ನರ್ ದಿಗ್ವೇಶ್ ರಾಥಿಯನ್ನು ಮುಂದಿನ ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಜೊತೆ ಜಗಳಕ್ಕಿಳಿದಿದ್ದ ರಾಥಿಗೆ ಒಂದು ಪಂದ್ಯದ ನಿಷೇಧ ಹೇರಲಾಗಿದೆ.


ಈ ನಿಷೇಧದೊಂದಿಗೆ ದಿಗ್ವೇಶ್ ರಾಥಿಗೆ ಪಂದ್ಯ ಶುಲ್ಕದ ಶೇ 50 ರಷ್ಟು ದಂಡವನ್ನು ಸಹ ವಿಧಿಸಲಾಗಿದೆ. ಸದ್ಯ ಅವರ ಡಿಮೆರಿಟ್ ಪಾಯಿಂಟ್ 5 ಕ್ಕೇರಿದ್ದು, ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ದಿಗ್ವೇಶ್​ನನ್ನು ಹೊರಗಿಡುವಂತೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೂಚಿಸಲಾಗಿದೆ.


ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿದ ಬಳಿಕ ದಿಗ್ವೇಶ್ ರಾಥಿ ನೋಟ್​ಬುಕ್ ಸೆಲೆಬ್ರೇಷನ್​ನೊಂದಿಗೆ ಬ್ಯಾಟರ್​ನನ್ನು ಕೆಣಕಿದ್ದರು. ಈ ಅನುಚಿತ ವರ್ತನೆಗೆ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿತ್ತು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.


ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಮನ್ ಧೀರ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಬಳಿಕ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್ ಮಾಡಿದ್ದರು. ಈ ಆಕ್ರೋಶಭರಿತ ಸಂಭ್ರಮಕ್ಕೆ ರಾಥಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿ, 2 ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಇದೀಗ ಮೂರನೇ ಬಾರಿಗೆ ದಿಗ್ವೇಶ್ ರಾಥಿ ಐಪಿಎಲ್​ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ದಿಗ್ವೇಶ್ ರಾಥಿಗೆ ಒಂದು ಪಂದ್ಯದ ನಿಷೇಧ ಹೇರಿದ್ದಾರೆ. ಇದರ ಜೊತೆಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿ, 2 ಡಿಮೆರಿಟ್ ಪಾಯಿಂಟ್ ನೀಡಿದ್ದಾರೆ.

ಇನ್ನು ದಿಗ್ವೇಶ್ ರಾಥಿ ಜೊತೆ ಮೈದಾನದಲ್ಲೇ ಜಗಳಕ್ಕಿಳಿದಿದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಲಾಗಿದೆ. ಅತ್ತ ಒಂದು ಪಂದ್ಯದ ನಿಷೇಧಕ್ಕೆ ಒಳಗಾಗಿರುವ ದಿಗ್ವೇಶ್ ರಾಥಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ಹೊರಬಿದ್ದಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ