Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೈಬರ್‌ ವಂಚಕರಿಂದ 50 ಲಕ್ಷ ರೂ. ವರ್ಗಾವಣೆ : ವೃದ್ಧ ದಂಪತಿ ಆತ್ಮಹತ್ಯೆ 

Advertisement
ಬೆಳಗಾವಿ: ಸೈಬರ್‌ ವಂಚಕರ ಕಾಟ ತಾಳಲಾರದೇ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಎಂದು ಗುರುತಿಸಲಾಗಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಸೂಸೈಡ್‌ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ದಂಪತಿ ಇಂಗ್ಲಿಷ್‌ನಲ್ಲಿ ಡೆತ್‌ನೋಟ್‌ ಬರೆದಿದ್ದಾರೆ.

ಈ ಕುರಿತು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್‌ ಪ್ರತಿಕ್ರಿಯಿಸಿ, ಸೈಬರ್ ವಂಚಕರು ಬೆದರಿಕೆ ಕರೆ ಮಾಡಿ ಡಯಾಗೊ ಅವರಿಂದ 50 ಲಕ್ಷ ರೂ. ಹೆಚ್ಚು ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ.

ಇಷ್ಟುಮಾತ್ರವಲ್ಲದೇ ಮತ್ತೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದ ತಮ್ಮ ಜೀವನವನ್ನು ಕೊನೆಗೊಳಿಸಲು ದಂಪತಿ ನಿರ್ಧರಿಸಿದ್ದರು. ತಮ್ಮ ಡೆತ್ ನೋಟ್‌ನಲ್ಲಿ, ದಂಪತಿ ಕೆಲವು ವ್ಯಕ್ತಿಗಳಿಂದ ಸಾಲ ಪಡೆದಿರುವುದಾಗಿ ಉಲ್ಲೇಖಿಸಿದ್ದಾರೆ ಎಂದು ತಿಳಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ