LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಎಕರೆಗೆ 50 ಸಾವಿರ ಬರ ಪರಿಹಾರ ನೀಡಿ : ಬಿ. ವೈ ವಿಜಯೇಂದ್ರ 

Advertisement

ಬೆಂಗಳೂರು : ರಾಜ್ಯದಲ್ಲಿ ಬರದ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ನೆರವಿಗೆ ಧಾವಿಸುವ ಬದಲು ಉಡಾಫೆಯಾಗಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದರು.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ವಿಶೇಷ ಅಧಿವೇಶನ ಕರೆದು ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ರೈತರಿಗೆ ನೇರ ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಇತರ ರಾಜ್ಯಗಳ ಸರ್ಕಾರಗಳು ಬರ ಮತ್ತು ಸಂಕಷ್ಟದ ಸಂದರ್ಭದಲ್ಲಿ ರೈತರಿಗೆ ನೀಡಿದ ನೆರವಿನ ಕುರಿತು ವಿಧಾನಮಂಡಲದಲ್ಲಿ ಚರ್ಚೆಯಾಗಿದೆ.

ನೆರೆಯ ಮಹಾರಾಷ್ಟ್ರದಲ್ಲಿಯೂ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ರೈತರಿಗೆ ಸಮರ್ಪಕ ಪರಿಹಾರ ನೀಡದೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಹೇಳಿದರು.

ಎಕರೆಗೆ ₹50 ಸಾವಿರ ಪರಿಹಾರ ನೀಡಲಿ

ಎರಡೂ ಸದನಗಳಲ್ಲಿ ಬಿಜೆಪಿ ರೈತರಿಗೆ ಎಕರೆಗೆ ಕನಿಷ್ಠ ₹50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.

ಆದರೆ ರಾಜ್ಯ ಸರ್ಕಾರ ರೈತರಿಗೆ ಕೇವಲ ₹2,500 ಪರಿಹಾರ ನೀಡಿ ಕೈತೊಳೆದುಕೊಂಡಿದೆ. ಇದು ರೈತರ ಸಂಕಷ್ಟಕ್ಕೆ ತಕ್ಕ ಪರಿಹಾರವಲ್ಲ. ಬರಗಾಲದಲ್ಲಿ ರೈತರ ಬೆನ್ನಿಗೆ ನಿಲ್ಲಬೇಕಿದ್ದ ಸರ್ಕಾರ ಅವರ ನೋವನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಜಯೇಂದ್ರ ಹೇಳಿದರು.

ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಸರ್ಕಾರ ಸೂಕ್ತ ಪರಿಹಾರ, ಸಾಲದ ಒತ್ತಡದಿಂದ ಮುಕ್ತಿ ಹಾಗೂ ಸಮರ್ಪಕ ವಿದ್ಯುತ್ ಸೇರಿದಂತೆ ಅಗತ್ಯ ನೆರವು ಒದಗಿಸಬೇಕಿತ್ತು. ಆದರೆ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದರು. 

ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ

ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ನಾಯಕರು ಗ್ಯಾರಂಟಿಗಳ ಮೂಲಕ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದರು.

 ಆದರೆ ಈಗ ಅದೇ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತಿದೆ ಎಂದು ವಿಜಯೇಂದ್ರ ಹೇಳಿದರು.

ಆರ್ಥಿಕ ಇಲಾಖೆ ನೀಡಿರುವ ಪತ್ರ ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಆದ್ದರಿಂದ ಹಣಕಾಸು ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೈಜ ಹಣಕಾಸು ಪರಿಸ್ಥಿತಿ ಕುರಿತು ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ವಿಕಲಚೇತನರ ಪಿಂಚಣಿ, ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಹಣ ತಲುಪುತ್ತಿಲ್ಲ. ಬಡವರಿಗೆ ಮನೆ ನಿರ್ಮಾಣದಂತಹ ಮೂಲಭೂತ ಕಾರ್ಯಕ್ರಮಗಳಿಗೂ ತೊಂದರೆಯಾಗಿದೆ.

ಆದರೆ ಸರ್ಕಾರ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಹೆಸರಿನಲ್ಲಿ ರಾಜಕೀಯ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

"ಜನರ ತೆರಿಗೆ ಹಣವನ್ನು ರಾಜಕೀಯ ಕಾರ್ಯಕರ್ತರಿಗಾಗಿ ಬಳಸುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು. ತೆರಿಗೆದಾರರ ಹಣಕ್ಕೆ ಸರ್ಕಾರ ಉತ್ತರದಾಯಿತ್ವ ಹೊಂದಿದೆ" ಎಂದು ವಿಜಯೇಂದ್ರ ಹೇಳಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಟ್ಟುಹಬ್ಬದ ಸಂಭ್ರಮದಲ್ಲೂ ಮಾನವೀಯತೆಯ ಸೇವೆಗೆ ಮುನ್ನುಡಿ ಬರೆದ ಜೀನೂರಿನ ಭಾಗ್ಯಶ್ರೀರಷ್ಯಾದಲ್ಲಿ ಯುದ್ಧ ವಿಮಾನ ಪತನ : ಆರು ಮಂದಿ ದಾರುಣ ಸಾವುಶಾಲಾ ವಾಹನ ಹರಿದು ಒಂದೂವರೆ ವರ್ಷದ ಮಗು ದಾರುಣ ಸಾವು ಕೊಕಟನೂರಿನ ಹೆಮ್ಮೆಗೆ ಮತ್ತೊಂದು ಗರಿವಾಲ್ಮೀಕಿ ನಿಗಮ ತಾಲೂಕ ಅಧಿಕಾರಿ ಗಜೇಂದ್ರ ಸಾರ್ವಜನಿಕರ ಜೊತೆ ದುರವರ್ತನೆ             ವಾಲ್ಮೀಕಿ ನಿಗಮ ತಾಲೂಕ ಅಧಿಕಾರಿ ಗಜೇಂದ್ರ ಸಾರ್ವಜನಿಕರ ಜೊತೆ ದುರವರ್ತನೆ             ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತಗೊಳಿಸಿದರೆ ಹುಷಾರ್: ಡಿ.ಕೆ ಶಿವಕುಮಾರ್ ಖಡಕ್ ಆದೇಶ444 ಕೋಟಿ ಟೆಂಡರ್ ಗೋಲ್‌ಮಾಲ್ ಆರೋಪ : ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು 3 ಲಕ್ಷ ಕೋಟಿಗಿಂತ ಹೆಚ್ಚು ಅವ್ಯವಹಾರ, ಅಶೋಕ್ ಖೇಣಿಗೆ ಒದ್ದು ಒಳಗೆ ಹಾಕಿ:ಕುಮಾರಸ್ವಾಮಿ ಬೈಲಹೊಂಗಲ : ವಿಚ್ಛೇದನ ಕೇಳಿದ್ದ ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದ ಪಾಪಿ ಪತಿ