LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಸ್ಸೆಸ್ಸೆಲ್ಸಿ ಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ 50 ಸಾವಿರ ರೂ. ನಗದು ಬಹುಮಾನ : ಮಧು ಬಂಗಾರಪ್ಪ 

Advertisement

ಬೆಂಗಳೂರು : ರಾಜ್ಯ ಸರ್ಕಾರ 2025-26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ, ಶೈಕ್ಷಣಿಕ ಜಿಲ್ಲಾವಾರು ಗರಿಷ್ಠ ಅಂಕ ಪಡೆದ ಮೂವರು ವಿದ್ಯಾಥಿಗಳಿಗೆ ಹಾಗೂ ಶೈಕ್ಷಣಿಕ ಬ್ಲಾಕ್‌ ವಾರು ಗರಿಷ್ಠ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ (ಜಿಲ್ಲಾವಾರು ಆಯ್ಕೆಯಾದ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಒಟ್ಟಾರೆ ರಾಜ್ಯದ ಅಂದಾಜು 800 ಅರ್ಹ ವಿದ್ಯಾರ್ಥಿಗಳಿಗೆ ತಲಾ 50,000 ರೂ. ನಂತೆ ನಗದು ಪುರಸ್ಕಾರ ನೀಡಲು ತೀರ್ಮಾನಿಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,ನಮ್ಮ ಸರ್ಕಾರಿ ಶಾಲಾ ಮಕ್ಕಳು ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಚಾರಿತ್ರಿಕ ದಾಖಲೆ ಬರೆದಿದ್ದರು. 2026ರ ಕ್ರೋಢೀಕೃತ ಉತ್ತೀರ್ಣ ಪ್ರಮಾಣ 2025ರ ಶೈಕ್ಷಣಿಕ ಸಾಲಿಗಿಂತ 20.89% ರಷ್ಟು ಹೆಚ್ಚಾಳವಾಗಿತ್ತು.

ಈ ಸಾಧನೆ ಮಾಡಿದ ನಮ್ಮ ಮಕ್ಕಳಿಗೆ ನಾವು ಪ್ರೋತ್ಸಾಹ ನೀಡದಿದ್ದರೆ ಹೇಗೆ? ಇದನ್ನು ಯೋಚಿಸಿ ನಮ್ಮ ಸರ್ಕಾರ 2025-26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ, ಶೈಕ್ಷಣಿಕ ಜಿಲ್ಲಾವಾರು ಗರಿಷ್ಠ ಅಂಕ ಪಡೆದ ಮೂವರು ವಿದ್ಯಾಥಿಗಳಿಗೆ ಹಾಗೂ ಶೈಕ್ಷಣಿಕ ಬ್ಲಾಕ್‌ ವಾರು ಗರಿಷ್ಠ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ (ಜಿಲ್ಲಾವಾರು ಆಯ್ಕೆಯಾದ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಒಟ್ಟಾರೆ ರಾಜ್ಯದ ಅಂದಾಜು 800 ಅರ್ಹ ವಿದ್ಯಾರ್ಥಿಗಳಿಗೆ ತಲಾ 50,000 ರೂ. ನಂತೆ ನಗದು ಪುರಸ್ಕಾರ ನೀಡಲು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಈ ಸಂಬಂಧ ಆದೇಶ ಕೂಡ ಹೊರಡಿಸಿದ್ದೇವೆ. ಈ ನಗದು ಪುರಸ್ಕಾರವನ್ನು ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಪಾವತಿಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿ ಪ್ರೇರಣಾ ಉಪಕ್ರಮದಡಿ ಅನುಮೋದನೆಯಾದ 3.25 ಕೋಟಿ ರೂ.ಗಳ ಅನುದಾನವನ್ನುಇದಕ್ಕೆ ಬಿಡುಗಡೆ ಮಾಡಲಾಗಿದೆ.

ನಮ್ಮ ಇಲಾಖೆಯ ಅಧಿಕಾರಿಗಳು ಆದಷ್ಟು ಬೇಗ ಪ್ರತಿಭಾವಂತ ವಿದ್ಯಾರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಅವರಿಗೆ 50 ಸಾವಿರ ರೂ. ನಗದು ಪುರಸ್ಕಾರ ಸಂದಾಯವಾಗುವಂತೆ ನೋಡಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಓದಿ, ಹೆಚ್ಚು ಅಂಕಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಈ ಹಣ ಖಂಡಿತವಾಗಿಯೂ ನೆರವಾಗಲಿದೆ ಎಂಬ ನಂಬಿಕೆ ನನ್ನದು. ಈ ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು, ನಾಡು ಹೆಮ್ಮೆಪಡುವಂತಹ ಸಾಧನೆ ಮಾಡಲಿ ಎಂದು ಆಶಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ