ಚಿತ್ರದುರ್ಗ: ಕರ್ನಾಟಕದ ಜನಪ್ರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಜೀವನದ ಸುವರ್ಣ ಮಹೋತ್ಸವದ ಅಂಗವಾಗಿ 'ಅಭಿಮಾನೋತ್ಸಾಹ' ಬೃಹತ್ ಸಮಾವೇಶಕ್ಕೆ ಕೋಟೆನಾಡು ಚಿತ್ರದುರ್ಗ ಸಂಪೂರ್ಣ ಸಜ್ಜಾಗಿದೆ.
ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಶ್ರೇಯಸ್ಸಿನ ಯಡಿಯೂರಪ್ಪ ಅವರ ಈ ಐತಿಹಾಸಿಕ ಕಾರ್ಯಕ್ರಮವು ಇಂದು ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಜೆ 4 ಗಂಟೆಗೆ ಸಮಾವೇಶಕ್ಕೆ ಆಗಮಿಸಲಿದ್ದಾರೆ. 112 ಅಡಿ ಉದ್ದ, 40 ಅಡಿ ಅಗಲ ಹಾಗೂ 10 ಅಡಿ ಎತ್ತರದ ಭವ್ಯ ವೇದಿಕೆಯನ್ನು 150ಕ್ಕೂ ಹೆಚ್ಚು ಕಾರ್ಮಿಕರು ಸಿದ್ಧಪಡಿಸಿದ್ದಾರೆ.
ಸಮಾವೇಶಕ್ಕೆ ರಾಜ್ಯದ ವಿವಿಧೆಡೆಯಿಂದ ಸುಮಾರು 10 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದೆ. ಶುಕ್ರವಾರವಷ್ಟೇ ಚಿತ್ರದುರ್ಗಕ್ಕೆ ಆಗಮಿಸಿದ ಯಡಿಯೂರಪ್ಪ ಅವರಿಗೆ 40 ಅಡಿ ಎತ್ತರದ ಬೃಹತ್ 24 ತಮಟೆಗಳ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಿದ್ದಾರೆ.

