Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರ ಸಂಘದ ಚುನಾವಣೆ: 32 ಸ್ಥಾನಕ್ಕೆ 54 ಮಂದಿ ನಾಮಪತ್ರ ಸಲ್ಲಿಕೆ

Advertisement
ತುರುವೇಕೆರೆ: ಅಕ್ಟೋಬರ್ 28 ರಂದು ನಡೆಯುವ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ 32 ನಿರ್ದೇಶಕ ಸ್ಥಾನಕ್ಕೆ ಈಗಾಗಲೇ 54 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಾಣೇಶ್ ತಿಳಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 27 ಇಲಾಖೆಗಳಿದ್ದು, 1279 ಮಂದಿ ಮತದಾರರಿದ್ದಾರೆ. ಈ ಪೈಕಿ ಕೆಲವು ಇಲಾಖೆಗಳಲ್ಲಿ ಒಂದರಿಂದ ನಾಲ್ಕು ಮಂದಿ ನಿರ್ದೇಶಕರ ಆಯ್ಕೆ ಮಾಡುವ ಅವಕಾಶವಿದೆ. ಈಗಾಗಲೇ ಕೃಷಿ, ಪಶು, ಕಂದಾಯ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್, ಪದವಿ ಕಾಲೇಜು, ಅರಣ್ಯ, ಆರೋಗ್ಯ, ತೋಟಗಾರಿಕೆ, ಖಜಾನೆ, ನ್ಯಾಯಾಂಗ, ಗ್ರಾಮೀಣಾಭಿವೃದ್ದಿಯಲ್ಲಿ ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಬಕಾರಿ, ಪಾಲಿಟೆಕ್ನಿಕ್ ಕಾಲೇಜು, ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ಕಛೇರಿಗಳಲ್ಲಿನ ಒಂದೊಂದು ಸ್ಥಾನ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ ಹಾಗೂ ಆಹಾರ ಇಲಾಖೆಯಲ್ಲಿ ತಲಾ ಎರಡು ಸ್ಥಾನಳಿದ್ದು, ಪ್ರತಿ ಸ್ಥಾನಕ್ಕೂ ಒಂದೊಂದೇ ಅರ್ಜಿ ಸಲ್ಲಿಕೆಯಾಗಿದೆ. ಒಟ್ಟಾರೆ 21 ಸ್ಥಾನಗಳಿಗೆ ಏಕೈಕ ಅರ್ಜಿ ಸಲ್ಲಿಕೆಯಾಗಿದೆ. ಉಳಿದಂತೆ 11 ಸ್ಥಾನಗಳಿದ್ದು 33 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಯ ಅವಧಿ ಹಾಗೂ ನಾಮಪತ್ರ ಪರಿಶೀಲನೆ ಕಾರ್ಯವೂ ಅಂತಿಮಗೊಂಡಿದೆ. ಇನ್ನು ಅಕ್ಟೋಬರ್ 21 ರಂದು ಸಂಜೆ 4.30 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ನಾಮಪತ್ರ ಹಿಂಪಡೆಯುವ ಅವಧಿ ಮುಗಿದ ನಂತರ ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗುವುದು. ಅಕ್ಟೋಬರ್ 28 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಚುನಾವಣೆಗೆ ಮತದಾನ ನಡೆಯಲಿದ್ದು, ಆ ನಂತರ ಫಲಿತಾಂಶ ಘೋಷಣೆ ಮಾಡಲಾಗುವುದು ಎಂದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ