Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲಿ 7 ಸಾವಿರ ವಿದ್ಯಾರ್ಥಿಗಳಿಗೆ ಎಚ್ಐವಿ ಸೋಂಕು : ಸರ್ಕಾರ ತುರ್ತು ಕ್ರಮ 

Advertisement

ಬೆಂಗಳೂರು : ಯುವಕರಲ್ಲಿ ಎಚ್‌ಐವಿ ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 

ರಾಜ್ಯದ ಎಲ್ಲಾ ಇಂಜಿನಿಯರಿಂಗ್, ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜು ಆವರಣದಲ್ಲೇ ಎಚ್‌ಐವಿ ಪರೀಕ್ಷೆ ಹಾಗೂ ಕೌನ್ಸೆಲಿಂಗ್ ಸೇವೆಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ.

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಘದ (KSAPS) ಮನವಿಯ ಮೇರೆಗೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಹಾಗೂ ಕಾಲೇಜು ಶಿಕ್ಷಣ ಇಲಾಖೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿವೆ. 

ವಿದ್ಯಾರ್ಥಿಗಳ ಗೌಪ್ಯತೆಗೆ ಸಂಪೂರ್ಣ ಗೌರವ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಉದ್ದೇಶಕ್ಕಾಗಿ 'Know Your HIV Status' ಎಂಬ ಕ್ಯೂಆರ್ ಕೋಡ್ ಆಧಾರಿತ ಆಯಪ್‌ನ್ನೂ ಅಭಿವೃದ್ಧಿಪಡಿಸಲಾಗುತ್ತಿದೆ.

ಈ ಹಿಂದೆ ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಹಾಗೂ ಕೇಂದ್ರ ಶಿಕ್ಷಣ ಸಚಿವಾಲಯವೂ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಚ್‌ಐವಿ ಕುರಿತು ಜಾಗೃತಿ ಮೂಡಿಸುವಂತೆ ಸೂಚಿಸಿತ್ತು. 

ಅದರ ಭಾಗವಾಗಿ ರಾಜ್ಯದಾದ್ಯಂತ ಹಲವು ಕಾಲೇಜುಗಳಲ್ಲಿ ವಿಶೇಷ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಎಚ್‌ಐವಿ ಪರೀಕ್ಷೆ ಮತ್ತು ಕೌನ್ಸೆಲಿಂಗ್ ಸೇವೆಗಳನ್ನು ನೀಡಲಾಗುವುದು.

ಈ ಯೋಜನೆಗೆ ಸಂಪೂರ್ಣ ಸಹಕಾರ ನೀಡುವಂತೆ ಆರೋಗ್ಯ ಇಲಾಖೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ. 

ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಎಚ್‌ಐವಿ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (NACO) ಅಂಕಿಅಂಶಗಳ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ.

ಸಂಸ್ಥೆಯ ಮಾಹಿತಿಯಂತೆ, ರಾಜ್ಯದಲ್ಲಿ ಒಟ್ಟು 2.60 ಲಕ್ಷ ಮಂದಿ ಎಚ್‌ಐವಿ ಸೋಂಕಿತರಾಗಿದ್ದು, ಅವರಲ್ಲಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ಇರುವುದೇ ತಿಳಿದಿಲ್ಲ. 18ರಿಂದ 25 ವರ್ಷದೊಳಗಿನ ಸುಮಾರು 7 ಸಾವಿರ ಯುವಕರು/ವಿದ್ಯಾರ್ಥಿಗಳು ಎಚ್‌ಐವಿ ಸೋಂಕಿನಿಂದ ಬಳಲುತ್ತಿದ್ದಾರೆ. 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಮನವೆಲ್ತ್ ಕ್ರೀಡಾಕೂಟ: ಭಾರತ ೯ ನೇ ಸ್ಥಾನದಲ್ಲಿವೆಸ್ಟ್ ಇಂಡೀಸ್‌ಗೆ ೯೦ ರನ್‌ಗಳ ಗೆಲುವುಕರ್ನಾಟಕದಲ್ಲಿ 7 ಸಾವಿರ ವಿದ್ಯಾರ್ಥಿಗಳಿಗೆ ಎಚ್ಐವಿ ಸೋಂಕು : ಸರ್ಕಾರ ತುರ್ತು ಕ್ರಮ MLC ಸದಸ್ಯ ಸ್ಥಾನ ಕೊಡಿಸುವುದಾಗಿ ನಂಬಿಸಿ ಸಮಾಜಸೇವಕಿಗೆ 1.50 ಕೋಟಿ ರೂ. ವಂಚನೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿದ:  ಶಾಸಕ ಎಸ್ ಮುನಿರಾಜುಹಣಕಾಸಿನ ವಿಚಾರಕ್ಕೆ ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗಬಾರದು : ಶಿಕ್ಷಣ ಇಲಾಖೆ ಅತ್ತೆ ಮಾವನಿಗೆ ಊಟ ನೀಡುವುದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್ ಕರ್ನಾಟಕದ 20,668 ಚದರ ಕಿಲೋಮೀಟರ್‌ ಅರಣ್ಯ ಸೂಕ್ಷ್ಮ ಭೂಪ್ರದೇಶ :ಕೇಂದ್ರ ಸರ್ಕಾರ ಘೋಷಣೆ ಆಗಸ್ಟ್ 1ರಂದು ಮೈಸೂರಿಗೆ ಪ್ರಧಾನಿ ಮೋದಿ : ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಉದ್ಘಾಟನೆ   ಪಾಕಿಸ್ತಾನ ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿ