LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಒಂದು ಹುದ್ದೆಗೆ 70-80 ಲಕ್ಷ ರೂ. ಲಂಚ , ರೆಸಾರ್ಟ್‌ ನಲ್ಲಿ ಓಎಂಆರ್‌ ತಿದ್ದುಪಡಿ : ಜ್ಞಾನೇಂದ್ರ ಅಕ್ರಮದ ರೂವಾರಿ

Advertisement

ಬೆಂಗಳೂರು: ಕೆಪಿಎಸ್‌ಸಿ (KPSC) ನಡೆಸಿದ 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿ ಸಿಐಡಿ ಮತ್ತು ಇಡಿ (ED) ತನಿಖೆ ತೀವ್ರಗೊಳಿಸಿದ್ದು, ಹಲವು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆಲಂಚ ಪಡೆಯಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ರೆಸಾರ್ಟ್‌ಗಳಲ್ಲಿ ಪ್ರತ್ಯೇಕವಾಗಿ ಪರೀಕ್ಷೆ ಬರೆಸಿ OMR ಶೀಟ್‌ ತಿದ್ದುಪಡಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿದ್ದ ಜ್ಞಾನೇಂದ್ರ, ಮಧ್ಯವರ್ತಿ ಹಾಗೂ ಬೀದರ್ ಜಿಲ್ಲೆಯ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಮೂಲ ಅಭ್ಯರ್ಥಿಗಳಿಗೆ ಒಂದಕ್ಕೆ 40 ಲಕ್ಷ ರೂಪಾಯಿಯಂತೆ ಮಾರಾಟ ಮಾಡಿದ್ದರು.

ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಓಎಂಆರ್ ಶೀಟ್ ತಿದ್ದುಪಡಿ ಹಾಗೂ ಸ್ಟ್ರಾಂಗ್ ರೂಮ್ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಲು ಯತ್ನಿಸಿರುವುದು ಸ್ಪಷ್ಟವಾಗಿ ಪತ್ತೆಯಾಗಿದೆ.

ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸೇರಿದಂತೆ ಪ್ರಮುಖರನ್ನು ಬಂಧಿಸಿದ್ದು, ಅನುಮಾನಾಸ್ಪದ ವಹಿವಾಟು ನಡೆಸಿದ 329ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಕೋಟ್ಯಂತರ ರೂಪಾಯಿ ಅಕ್ರಮ ಹಣಕಾಸು ವರ್ಗಾವಣೆ (Money Laundering) ನಡೆದಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಹ ರಂಗಕ್ಕಿಳಿದಿದ್ದು, KPSC ಕಚೇರಿ ಹಾಗೂ ಪ್ರಮುಖರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿದೆ. ಪ್ರಕರಣದ ಹಿನ್ನೆಲೆಯಲ್ಲಿ ಅಂತಿಮ ಆಯ್ಕೆ ಪಟ್ಟಿಗೆ ಸದ್ಯ ತಡೆ ನೀಡಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST