Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

79ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ತಹಶೀಲ್ದಾರರಿಂದ ಧ್ವಜಾರೋಹಣ

Advertisement
ಸಿರುಗುಪ್ಪ : ನಗರದ ತಾಲೂಕು ಕ್ರೀಡಾಂಗಣಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯಿತಿ ಹಾಗೂ ನಗರಸಭೆಯ ಸಹಯೋಗದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಜರುಗಿತು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ, ತಹಶೀಲ್ದಾರ್ ಗೌಸಿಯಾ ಬೇಗಂ ಅವರು ರಾಷ್ಟ್ರ ಧ್ವಜರೋಹಣ ಮಾಡಿದರು.



ನಂತರ ಮಾತನಾಡಿ ಬ್ರಿಟೀಷ್ ವಸಾಹತು ಶಾಹಿಯಿಂದ ನಮ್ಮ ಮಾತೃಭೂಮಿಯನ್ನು ಬಿಡಿಸಲು ಹೋರಾಡಿ ತ್ಯಾಗ ಬಲಿದಾನಗೈದ ಹೋರಾಟಗಾರರು, ಅಸಂಖ್ಯಾತ ವೀರ ಚೇತನರನ್ನು ಸ್ಮರಿಸುವ ಸುದಿನ ಸ್ವಾತಂತ್ರ್ಯ ದಿನಾಚರಣೆಯಾಗಿದೆ.

ಭಾರತ ಸರ್ಕಾರವು ಲಿಂಗ ಅಸಮಾನತೆಯನ್ನು ತೊಲಗಿಸಲು ಪ್ರಜಾಪ್ರಭುತ್ವವನ್ನು ರಚಿಸಲಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರರ ಸಂವಿಧಾನವು ಮಹಿಳೆಯ ಏಳ್ಗೆಗೆಗೆ ಆಧಾರವಾಗಿದೆ. ಅದರಂತೆ ಇನ್ನುಳಿದ ಮಹಿಳೆಯರು ಪ್ರಗತಿಯನ್ನು ಹೊಂದಬೇಕೆಂದರು. ಶಾಸಕ ಬಿ.ಎಮ್.ನಾಗರಾಜ ಅವರು ಮಾತನಾಡಿ ಈ ಹಿಂದೆ ತಾಲೂಕಿನಲ್ಲಿ ಅನೇಕ ಪ್ರಗತಿ ಕಾರ್ಯಗಳನ್ನು ಮಾಡಲಾಗಿದೆ.

ಅದರಂತೆ ಈ ಸಲವು ಅನೇಕ ಸವಾಲುಗಳಾದ ಶಿಕ್ಷಣ ಇಲಾಖೆಯಲ್ಲಿ ಕಟ್ಟಡ, ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ, ರಸ್ತೆ ಕಾಮಗಾರಿಯಲ್ಲಿ ಬಹಳಷ್ಟು ಪ್ರಗತಿಯನ್ನು ಸಾಧಿಸಬೇಕಿದ್ದು ನಿಮ್ಮೆಲ್ಲರ ಸಹಕಾರ ಅತ್ಯಗತ್ಯವಾಗಿದೆ ಎಂದರು.

ಮಕ್ಕಳ ಡೊಳ್ಳು ಕುಣಿತ, ದೇಶ ಭಕ್ತಿಯ ಹಾಡುಗಳಿಗೆ ಮಕ್ಕಳು ನೃತ್ಯಗೈದರು. ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಇದೇ ವೇಳೆ ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ, ಉಪಾಧ್ಯಕ್ಷೆ ಯಶೋದಾ ಮೂರ್ತಿ, ಪೋಲೀಸ್ ಉಪ ಅಧೀಕ್ಷಕರಾದ ಡಾ.ಸಂತೋಷ್ ಚವ್ಹಾಣ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪವನ್‌ಕುಮಾರ್ ಎಸ್.ದಂಡಪ್ಪನವರ್, ಪೌರಾಯುಕ್ತ ಗಂಗಾಧರ, ಕ್ಷೇತ್ರ ಶಿಕ್ಷಣಾಧಿಕಾರಿ ಗುರ‍್ರಪ್ಪ, ನಗರಸಭೆ ಸದಸ್ಯರು, ಇನ್ನಿತರ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ