Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊಳಕಾಲ್ಮುರು ಪಟ್ಟಣದಲ್ಲಿ 79ನೇ ಭಾರತ ಸ್ವಾತಂತ್ರ್ಯ ದಿನಾಚರಣೆ

Advertisement
ಮೊಳಕಾಲ್ಮೂರು:  79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಸಂತೋಷದಿಂದ ಆಚರಿಸುತ್ತಿದ್ದೇವೆ 1947ರ ಆಗಸ್ಟ್ 15ರಂದು ನಮ್ಮ ದೇಶ ಬ್ರಿಟಿಷ ಆಡಳಿತದಿಂದ ಮುಕ್ತವಾಯಿತು ಎಂದು ತಾಲೂಕು ದಂಡಾಧಿಕಾರಿಗಳಾದ ಡಾ ನಾಗವೇಣಿ ಅವರು ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಿಂಭಾಗದಲ್ಲಿ 79ನೇ ಭಾರತ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಭಗತ್ ಸಿಂಗ್ ಸುಭಾಷ್ ಚಂದ್ರ ಬೋಸ್ ಚಂದ್ರಶೇಖರ್ ಆಜಾದ್ ಸರ್ದಾರ್ ವಲ್ಲಭಾಯಿ ಪಟೇಲ್ ಜಾನ್ಸಿ ರಾಣಿ ಲಕ್ಷ್ಮೀಬಾಯಿ ಕಿತ್ತೂರು ರಾಣಿ ಚೆನ್ನಮ್ಮ ಸಂಗೊಳ್ಳಿ ರಾಯಣ್ಣ ಬೆಳವಡಿ ಮಲ್ಲಮ್ಮ ನೆಹರು ಗಾಂಧೀಜಿ ಇಂತಹ ಅನೇಕ ಲಕ್ಷಾಂತರ ಮಹನೀಯರು ಹೋರಾಟಗಾರರ ತ್ಯಾಗ ಬಲಿದಾನದಿಂದ ಈ ದೇಶ ಸ್ವತಂತ್ರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎನ್ ವೈ ಪಿ ಚೇತನ್ ರವರು ಮಾತನಾಡಿ
ಈ ದಿನವೂ ಕೇವಲ ಆಚರಣೆಯ ದಿನವಲ್ಲ ಇದು ನಮ್ಮ ಕರ್ತವ್ಯಗಳನ್ನು ನೆನಪಿಸಿಕೊಳ್ಳುವ ದಿನ ಪ್ರಜಾಪ್ರಭುತ್ವ ಧರ್ಮ ಸಮಾನತೆ ಹಾಗೂ ಏಕತೆಯ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ನಾಗರಿಕರ ಜವಾಬ್ದಾರಿಯಾಗಿದೆ ಅದೇ ರೀತಿ ನಮ್ಮ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯ ನಿರಂತರ ನಡೆಯುತ್ತಿದ್ದು ಶಿಕ್ಷಣ ಆರೋಗ್ಯ ಮೂಲಭೂತ ಸೌಕರ್ಯ ಪರಿಸರ ಸಂರಕ್ಷಣೆ ಈ ಎಲ್ಲಾ ಕ್ಷೇತ್ರಗಳಲ್ಲಿ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ಜನತೆಗೆ ತಲುಪಿಸುವ ಜವಾಬ್ದಾರಿ ನಮ್ಮದಾಗಿದೆ ಇದಕ್ಕಾಗಿ ತಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದರು

ನಮ್ಮ ದೇಶ ಪ್ರಗತಿ ಜೊತೆಗೆ ನಮ್ಮ ಗ್ರಾಮ ತಾಲೂಕು ಜಿಲ್ಲೆ ರಾಜ್ಯದ ಅಭಿವೃದ್ಧಿಗೆ ಶ್ರಮಿಸುವಂತೆ ಪ್ರತಿಜ್ಞೆ ಮಾಡೋಣ ದೇಶದ ಹಿತಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ ಯುವ ಪೀಳಿಗೆಗೆ ನನ್ನ ಸಂದೇಶ ಶಿಸ್ತು ಪ್ರಾಮಾಣಿಕತೆ ಮತ್ತು ದೇಶಭಕ್ತಿಯಿಂದ ತಮ್ಮ ವಿದ್ಯಾಭ್ಯಾಸ ಮತ್ತು ವೃತ್ತಿ ಜೀವನವನ್ನು ಮುಂದುವರಿಸಲಿ ಅಂತಿಮವಾಗಿ ನಮ್ಮ ಧ್ವಜದ ತ್ರಿವರ್ಣಗಳ ಪ್ರತಿಬಿಂಬಿಸುವ ಸೌರ್ಯ ಶಾಂತಿ ಮತ್ತು ಸಮೃದ್ಧಿ ಸದಾ ನಮ್ಮ ಬದುಕಿನಲ್ಲಿ ಅರಳಲಿ ಮತ್ತೊಮ್ಮೆ ನಿಮಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ತಿಳಿಸಿದರು.

ವಿಶೇಷವಾಗಿ ಎಸೆಸೆಲ್ಸಿ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ಸನ್ಮಾನ ಮಾಡಲಾಯಿತು. ಅದೇ ರೀತಿ ತಾಲೂಕಿನ ಉತ್ತಮ ಪತ್ರಕರ್ತರಾಗಿ ಟೈಮ್ಸ್ ಆಫ್ ಕರ್ನಾಟಕದ ಜೀರ್ಣ ಯಾದವ್, ಮತ್ತು ಈ ನಮ್ಮ ಕನ್ನಡ ನಾಡು ಪತ್ರಿಕೆಯ ಬಸವರಾಜ್ ಅವರಿಗೆ ಸನ್ಮಾನ ಮಾಡಲಾಯಿತು.

ಅದೇ ರೀತಿ ವಿಧ ಶಾಲೆಯ ಮಕ್ಕಳ ಮನೋರಂಜನ ನೃತ್ಯವು ಎಲ್ಲರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಪಟ್ಟಣ ಪಂಚಾಯತಿ ಅಧ್ಯಕ್ಷರು ಸದಸ್ಯರುಗಳು, ಮತ್ತು ಉಪ ನಿರ್ದೇಶಕರು ಜವಳಿ ಮತ್ತು ಕೈಮಗ್ಗ ಇಲಾಖೆ ಚಿತ್ರದುರ್ಗ ಲಕ್ಷ್ಮಣ್ ತಳವಾರ್, ಕಾರ್ಯನಿರ್ವಾಹಕ ಅಧಿಕಾರಿಗಳು ಹನುಮಂತಪ್ಪ ಎಚ್, ಆರಕ್ಷಕ ವೃತ್ತ ನಿರೀಕ್ಷಕರಾದ ವಸಂತ್ ವಿ ಅಸೂದೆ, ಸಬ್ ಇನ್ಸ್ಪೆಕ್ಟರ್ ಮಹೇಶ್ ಹೊಸಪೇಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ನಿರ್ಮಲಾದೇವಿ ಮುಖಂಡರುಗಳಾದ ಯರ್ಜಿನಳ್ಳಿ ನಾಗರಾಜ್, ಪಟೇಲ್ ಜಿ ಪಾಪ್ ನಾಯಕ್ ರೈತ ಸಂಘದ ಜಿಲ್ಲಾಧ್ಯಕ್ಷರಾದ ರವಿಕುಮಾರ್, ಮಾರು ನಾಯಕ ಕೊಂಡಾಪುರದ ಪರಮೇಶಪ್ಪ, ವಕೀಲ ವಕೀಲರ ಸಂಘದ ಅಧ್ಯಕ್ಷರಾದ ವಸಂತ್ ಕುಮಾರ್ ವಕೀಲರಾದ ವಿಜಯ್, ಇನ್ನು ಹಲವರು ಉಪಸ್ಥಿತರಿದ್ದರು.

ವರದಿ: ಪಿಎಂ ಗಂಗಾಧರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ