LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಿದ್ದೇಶ್ವರ ಜಾತ್ರೆಯಲ್ಲಿ ಬರ್ಬರ ಹತ್ಯೆ : 8 ಆರೋಪಿಗಳು ಅರೆಸ್ಟ್ 

Advertisement
ಬೆಳಗಾವಿ: ಬೆಳಗಾವಿಯ ಹಣ್ಣಿಕೇರಿ ಗ್ರಾಮದ ಸಿದ್ದೇಶ್ವರ ಜಾತ್ರೆಯಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈದಿದ್ದ ಪ್ರಕರಣ ಸಂಬಂಧ ನೆಸರಗಿ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

ಮಾರ್ಚ್ 31 ರಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ಸಿದ್ದೇಶ್ವರ ಜಾತ್ರೆಯಲ್ಲಿ ಮದ್ಯಪಾನ ಮಾಡಿ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈಯ್ಯಲಾಗಿತ್ತು.

ಹಳೆಯ ವೈಷ್ಯಮಕ್ಕೆ ಕೊಲೆ ನಡೆದಿತ್ತು. ಸಂಗನಗೌಡ ಬಸನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ.

ಪ್ರಕರಣ ಸಂಬಂಧ ನೇಸರಗಿ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ದೇಮಪ್ಪ @ ಮುದಕಪ್ಪ ಬಸಲಿಂಗಪ್ಪ ಬಳಗನ್ನವರ (49), ಮಂಜುನಾಥ ಮಾರುತಿ ಬಳಗನ್ನವರ (27), ರುದ್ರಪ್ಪ ಚೂನಪ್ಪ @ ಶಿವನಪ್ಪ ಬಳಗನ್ನವರ (36), ವಿಜಯ ಸುರೇಶ ಬಳಗನ್ನವರ (26), ಸೂರಪ್ಪ ಬಸಲಿಂಗಪ್ಪ ಬಳಗನ್ನವರ (56), ಸಿದ್ದಪ್ಪ ಬಸಪ್ಪ ಸಿಂಗಾಡಿ ವಯಸ್ಸು (21), ನಾಗರಾಜ ರಾಮಪ್ಪ ಬಳಗನ್ನವರ (26) ಹಾಗೂ ಬಸವಂತಪ್ಪ ಲಕ್ಷ್ಮಣ ಬಳಗನ್ನವರ (45) ಬಂಧಿತ ಆರೋಪಿಗಳು.

ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ