ರಾಮದುರ್ಗ: ಸಂತೆ, ಜಾತ್ರೆ ನಡೆಯುವ ವಿವಿಧ ಗ್ರಾಮಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದ ಎಂಟು ಆರೋಪಿಗಳನ್ನು ಕಟಕೋಳ ಪೋಲಿಸ್ ಠಾಣೆ ಪೋಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ವಿಕಾಸ್ ವೆಂಕಟೇಶ ಭೋವಿ, ಪ್ರವೀಣ ಭೋವಿ, ಸಂತೋಷ್, ಶಿವು, ವೆಂಕಟೇಶ್, ಅಕ್ಷಯ್, ಹುಬ್ಬಳ್ಳಿಯ ಸಚಿನ್ ಲಕ್ಷ್ಮಣ ಕಲ್ಲವಡ್ಡರ ಅವರನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿ ಆಧರಿಸಿ ಪೊಲೀಸರ ವಿಶೇಷ ತಂಡ ರಚಿಸಿ ಎಸ್ಪಿ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದರು.
ಬಂಧಿತರಿಂದ ಒಟ್ಟು 4.94 ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಯ 40 ಮೊಬೈಲ್ ಫೋನ್ ಗಳು, 5.40 ಲಕ್ಷ ರೂಪಾಯಿ ಮೌಲ್ಯದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಕಟಕೊಳ ಪೊಲೀಸ್ ಠಾಣೆ ವ್ಯಾಪ್ತಿಯ ಜನನಿಬಿಡ ಪ್ರದೇಶ, ಸಂತೆ, ಜಾತ್ರೆ ನಡೆಯುವ ವಿವಿಧ ಗ್ರಾಮಗಳಲ್ಲಿ ಆರೋಪಿಗಳು ಜನರ ಗಮನ ಬೇರೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದರು.


