Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್‌ ಕ್ಯಾಮೆರಾ ಇಟ್ಟು ಚಿತ್ರೀಕರಣ : 8 ಸಾವಿರ ವಿಡಿಯೋಗಳು ಪತ್ತೆ

Advertisement
ಬೆಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್‌ ಕ್ಯಾಮೆರಾ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ್ದಾರೆ.

ಕುಶಾಲ್‌ ಎಂಬ ವಿದ್ಯಾರ್ಥಿಯೇ ಬಂಧಿತ ಆರೋಪಿ. ಈತ ತಾನು ವ್ಯಾಸಂಗ ಮಾಡುತ್ತಿದ್ದ ಕಾಲೇಜಿನ ಲೇಡೀಸ್‌ ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ.ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಆತನನ್ನು ಬಂಧನ ಮಾಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಈ ಹಿನ್ನೆಲೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಈ ಘಟನೆ ಮೈಸೂರು ರಸ್ತೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಶೌಚಾಲಯದಲ್ಲಿ ಮೊಬೈಲ್‌ ಕ್ಯಾಮೆರಾ ಇಟ್ಟಿರುವುದನ್ನು ವಿದ್ಯಾರ್ಥಿನಿಯೊಬ್ಬಳು ಗಮನಿಸಿದ್ದಾಳೆ. ಗಾಬರಿಗೊಂಡ ಆಕೆ ಓಡಿ ಬಂದಿದ್ದಾಳೆ. ಈ ವೇಳೆ ಆರೋಪಿ ಕುಶಾಲ್‌ನನ್ನು ವಿದ್ಯಾರ್ಥಿಗಳು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ.

ಬಳಿಕ ಆತನನ್ನು ಬಂಧನ ಮಾಡಬೇಕೆಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸುವ ಪ್ರಯತ್ನ ಮಾಡಿದ್ದಾರೆ. ವಿಡಿಯೋ ಚಿತ್ರೀಕರಣ ಮಾಡಿದ್ದಾನೆ ಎನ್ನಲಾದ ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನು ಬಂಧಿತ ವಿದ್ಯಾರ್ಥಿಯ ಮೊಬೈಲಿನಲ್ಲಿ ಸುಮಾರು 8 ಸಾವಿರ ವಿಡಿಯೋಗಳು ಇರುವುದು ಪತ್ತೆಯಾಗಿದೆ. ಆತ ಹಲವು ತಿಂಗಳುಗಳಿಂದ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ಮಾಡುತ್ತಿದ್ದ ಎನ್ನಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ