Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿಯಿಂದ ಬೇಸತ್ತ ಪತಿಗೆ ನ್ಯಾಯಾಲಯ ವಿಚ್ಛೇದನಕ್ಕೆ ಅವಕಾಶ

Advertisement
ಇಂದೋರ್: ಇಂದೋರ್​ನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನದ ವಿಶಿಷ್ಟ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯಿಂದ ಬೇಸತ್ತ ಪತಿಗೆ ನ್ಯಾಯಾಲಯ ವಿಚ್ಛೇದನಕ್ಕೆ ಅವಕಾಶ ನೀಡಿದೆ. ಆದರೆ ಇದನ್ನು ಪತ್ನಿ ಮಧ್ಯ ಪ್ರದೇಶ ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದು, ಕೌಟುಂಬಿಕ ನ್ಯಾಯಾಲಯದ ತೀರ್ಪನ್ನೇ ಹೈಕೋರ್ಟ್‌ ಎತ್ತಿ ಹಿಡಿಯಿತು.

ಈ ಪ್ರಕರಣದಲ್ಲಿ ಪತಿ, ಹೆಂಡತಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದರ ಜೊತೆಗೆ ಇತರ ಪುರುಷರೊಂದಿಗೆ ಅಶ್ಲೀಲವಾಗಿ ಚಾಟ್​ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಪತ್ನಿಯೂ, ಪತಿಯ ವಿರುದ್ಧ ಕೌಟುಂಬಿಕ ಹಿಂಸಾಚಾರ ಹಾಗೂ 25 ಲಕ್ಷ ರೂ. ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹೈಕೋರ್ಟ್​ನ ನ್ಯಾಯಮೂರ್ತಿ ವಿವೇಕ್​ ರುಸಿಯಾ ಹಾಗೂ ಗಜೇಂದ್ರ ಸಿಂಗ್​ ಅವರಿದ್ದ ಪೀಠ, ಈ ಪ್ರಕರಣದ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ ಪತಿ, ತಮ್ಮ ಪತ್ನಿ ಇತರ ಪುರುಷರಿಗೆ ಕಳುಹಿಸಿದ ಅಶ್ಲೀಲ ವಾಟ್ಸ್‌ಆ್ಯಪ್​ ಚಾಟ್​ಗಳ ಪುರಾವೆ ಇದೆ ಎಂದು ತಿಳಿಸಿದರು. ಪತಿ ಮಂಡಿಸಿದ ಸಾಕ್ಷ್ಯಗಳನ್ನು ಪರಿಗಣಿಸಿದ ಹೈಕೋರ್ಟ್​, ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಿತು. "ಯಾವುದೇ ಪತಿ ಅಥವಾ ಪತ್ನಿ ಯಾವುದೇ ವ್ಯಕ್ತಿಯೊಂದಿಗೆ ಅಶ್ಲೀಲ ಸಂಭಾಷಣೆ ನಡೆಸುವ ಮನೋಭಾವವನ್ನು ಸಹಿಸಲು ಸಾಧ್ಯವಿಲ್ಲ. ಹೀಗೆ ಮಾಡುವುದು ಸಂಗಾತಿಗೆ ಮಾಡುವ ಮಾನಸಿಕ ಕ್ರೌರ್ಯ" ಎಂದು ಹೇಳಿತು.

ಪತ್ನಿಯ ವಾದವೇನು?: ಈ ಆರೋಪಗಳ ಕುರಿತು ಪ್ರತಿವಾದಿಸಿರುವ ಪತ್ನಿ, ಪತಿ ತನ್ನ ಮೊಬೈಲ್​ ಫೋನ್​ ಹ್ಯಾಕ್​ ಮಾಡಿ, ಆ ಇಬ್ಬರು ಪುರುಷರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ. ಮಾತ್ರವಲ್ಲದೆ ತನಗೆ ಹಿಂಸೆ ನೀಡಿದ್ದು, 25 ಲಕ್ಷ ರೂ. ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ