LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಜನರ ಮೇಲೆ ಕಲ್ಲು ಎಸೆದಿದ್ದಾನೆ ಎಂದು ದಲಿತ ಯುವಕನ ಬರ್ಬರ ಹತ್ಯೆ 

Advertisement
ಬಾಗಲಕೋಟೆ: ಜನರ ಮೇಲೆ ಕಲ್ಲು ಎಸೆದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ದಲಿತ ಯುವಕನೊಬ್ಬನನ್ನು ಅಮಾನುಷವಾಗಿ ಹೊಡೆದು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ

ಬುಧವಾರ ರಾತ್ರಿ ಸಾವಳಗಿ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಗ್ರಾಮಸ್ಥರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದ್ದರು. ಪಂಚಾಯಿತಿ ಕಟ್ಟಡದ ಛಾವಣಿಯ ಮೇಲೆ ಕುಳಿತಿದ್ದ ಕೆಲವು ಯುವಕರಲ್ಲಿ ಯಾರೋ ಒಬ್ಬರು ಕೆಳಗೆ ಕುಳಿತಿದ್ದವರ ಮೇಲೆ ಸಣ್ಣ ಕಲ್ಲನ್ನು (ಹಳ್ಳು) ಎಸೆದಿದ್ದಾರೆ ಎನ್ನಲಾಗಿದೆ.

ಛಾವಣಿಯ ಮೇಲೆ ಕುಳಿತಿದ್ದ 19 ವರ್ಷದ ದಲಿತ ಯುವಕ ಸುದೀಪ್ ಬಸಪ್ಪ ಪಾಂಗಿ ಎಂಬಾತನೇ ಕಲ್ಲು ಎಸೆದಿದ್ದಾನೆ ಎಂದು ಆರೋಪಿಸಿ, ಆರೋಪಿಗಳು ಆತನೊಂದಿಗೆ ಜಗಳವಾಡಿದ್ದಾರೆ.

ಈ ವೇಳೆ ಸುದೀಪ್‌ಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮನಸೋಇಚ್ಛೆ ಥಳಿಸಿದ್ದಾರೆ.ತೀವ್ರವಾಗಿ ಗಾಯಗೊಂಡ ಸುದೀಪ್‌ನನ್ನು ತಕ್ಷಣ ಜಮಖಂಡಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜು ಭೀಮಪ್ಪ ಮಾಳಿ, ವಿಜಯ ರಾಮಚಂದ್ರ ಸಾವಳಗಿ ಮತ್ತು ಮಲ್ಲಿಕಾರ್ಜುನ ನಿಂಗಪ್ಪ ಮಾಳಿ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ