Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪಘಾತದಲ್ಲಿ ಸತ್ತಿಲ್ಲ ಖ್ಯಾತ ಗಾಯಕ : 5 ಸಾವಿರಕ್ಕಾಗಿ ಹತ್ಯೆಗೈದ ರಾಕ್ಷಸರು

Advertisement
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆಯಾಗಿದ್ದು , ಕೇವಲ 5000 ವಿಚಾರಕ್ಕೆ ಸಿಂಗರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಕಾರು ಹತ್ತಿಸಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೂದಿಹಾಳ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ.

ಮಾರಕಸ್ತ್ರಗಳಿಂದ ಕೊಚ್ಚಿ ಮಾರುತಿ ಅಡಿವೆಪ್ಪ ಲಟ್ಟೇ (22) ಎನ್ನುವ ಸಿಂಗರ್ ನನ್ನು ಕೊಲೆ ಮಾಡಲಾಗಿದೆ. ಈರಪ್ಪ ಅಕ್ಕಿವಾಟೆ ಸೇರಿದಂತೆ 11 ಜನರಿಂದ ಗಾಯಕ ಮಾರುತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದ್ದು, ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುತ್ತ ಮಾರುತಿ ರಂಜಿಸುತ್ತಿದ್ದ. ಬೈಕ್ ಮೇಲೆ ಸ್ನೇಹಿತನ ಜೊತೆಗೆ ಬರುತ್ತಿದ್ದ. ಈ ವೇಳೆ ಬೈಕ್ ಅಡ್ಡಕಟ್ಟಿ ದುಷ್ಕರ್ಮಿಗಳು ಮಾರುತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಆರೋಪಿ ಈರಪ್ಪ ಬಳಿ ಮಾರುತಿ 50,000 ಸಾಲ ಪಡೆದಿದ್ದ. ಸಾವಿರ ರೂಪಾಯಿ ಪೈಕಿ 45,000 ಮಾರುತಿ ವಾಪಸ್ ನೀಡಿದ್ದ.

ಇತ್ತೀಚಿಗೆ ಮಾರುತಿಗೆ ಹಾಡಿನಲ್ಲಿ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕೆಲಸ ಬಿಟ್ಟು ಆತ ಹಾಡುವುದರಲ್ಲಿ ಬ್ಯುಸಿಯಾಗಿದ್ದ. ಕೆಲಸಕ್ಕೂ ಹೋಗದೆ ಹಣ ವಾಪಸ್ ನೀಡುವ ನೀಡದ ಹಿನ್ನೆಲೆ ಮಾರುತಿಯನ್ನು ಕೊಲೆ ಮಾಡಲಾಗಿದೆ. ಹತ್ಯೆಯ ಬಳಿಕ ಮಾರುತಿಯ ಮೇಲೆ ಕಾರು ಹತ್ತಿಸಿ ಆರೋಪಿಗಳು ಕೊಲೆ ಮಾಡಿದ್ದಾರೆ.

ಈ ವೇಳೆ ಕಾರು ಕೂಡ ಪಲ್ಟಿಯಾಗಿ ಆರೋಪಿಗಳು ಗಾಯಗೊಂಡಿದ್ದಾರೆ. ಗೋಕಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿ ಈರಪ್ಪಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ.ಈ ವೇಳೆ ಪೊಲೀಸರು ಸಿದ್ಧರಾಮ ಒಡೆಯರ್ ಮತ್ತು ಆಕಾಶ್ ಪೂಜಾರಿಯನ್ನು ಅರೆಸ್ಟ್ ಮಾಡಿದ್ದಾರೆ ರಾಯಭಾಗ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ