Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂ ಪರಿಹಾರ ನೀಡದೇ ಸತಾಯಿಸುತ್ತಿದ್ದ ಸರ್ಕಾರಿ ನೌಕರನಿಗೆ ಚಪ್ಪಲಿಯಲ್ಲಿ ಹೊಡೆದ ರೈತ

Advertisement

ಬಾಗಲಕೋಟೆ: ಭೂ ಪರಿಹಾರ ನೀಡದೇ ನಾಲ್ಕು ವರ್ಷಗಳಿಂದ ಸತಾಯಿಸುತ್ತಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಕಚೇರಿಯ ಸಿಬ್ಬಂದಿಗೆ ರೈತನೋರ್ವ ಚಪ್ಪಲಿಯಿಂದ ಹೊಡೆದ ಘಟನೆ ನಡೆದಿದೆ.

ಮುಳುಗಡೆ ಭೂಮಿಗೆ ಕಳೆದ ನಾಲ್ಕು ವರ್ಷಗಳಿಂದ ಸೂಕ್ತ ಪರಿಹಾರ ಸಿಗದೆ ಬೇಸತ್ತ ರೈತ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ನುಗ್ಗಿ, ನೌಕರನೊಬ್ಬನಿಗೆ ಚಪ್ಪಲಿಯಿಂದ ಥಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಫಾಯಿ ಕರ್ಮಚಾರಿಗಳಿಗೆ ಪ್ಲಾಟ್ ಹಂಚಿಕೆ ಮಾಡದ ಹಿನ್ನೆಲೆಯಲ್ಲಿ ಡಿಎಸ್‌ಎಸ್ (ದಲಿತ ಸಂಘರ್ಷ ಸಮಿತಿ) ಮುಖಂಡರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿದ್ದ ಸಂದರ್ಭದಲ್ಲೇ ಈ ಹೈಡ್ರಾಮಾ ನಡೆದಿದೆ.

ಕಳೆದ ಒಂದು ವರ್ಷದಿಂದ 15 ಜನ ಸಫಾಯಿ ಕರ್ಮಚಾರಿಗಳಿಗೆ ಸೈಟ್ ಮಂಜೂರು ಮಾಡಿಲ್ಲ ಎಂದು ಆಗ್ರಹಿಸಿ ಡಿಎಸ್‌ಎಸ್‌ ಹೋರಾಟಗಾರರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು.

ಈ ಮುತ್ತಿಗೆಯ ವೇಳೆ ಕಚೇರಿಗೆ ಆಗಮಿಸಿದ ರೈತ ಬಸಪ್ಪ ದೊಡಮನಿ ಎಂಬುವವರು ಡಿಎಸ್‌ಎಸ್‌ ಮುಖಂಡರ ಎದುರೇ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ನನ್ನ ಭೂಮಿ ಮುಳುಗಡೆಯಾಗಿ ನಾಲ್ಕು ವರ್ಷಗಳೇ ಕಳೆದರೂ ಬಿಟಿಡಿಎ ಅಧಿಕಾರಿಗಳು ಈವರೆಗೆ ನನಗೆ ಭೂ ಪರಿಹಾರ ನೀಡಿಲ್ಲ. ಪರಿಹಾರಕ್ಕಾಗಿ ಕಚೇರಿಗೆ ಅಲೆದು ಅಲೆದು ಸುಸ್ತಾಗಿದೆ ಎಂದು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ಬಸಪ್ಪ ದೊಡಮನಿ ಆಕ್ರೋಶ ಹೊರಹಾಕುತ್ತಿದ್ದಂತೆ, ಅಲ್ಲಿಯೇ ಇದ್ದ ಬಿಟಿಡಿಎ ಹಿರಿಯ ಸಹಾಯಕ ಹಾಗೂ ಟೈಪಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವ ನೀಲಕಂಠ ಅಂಕದ್ ಮತ್ತು ರೈತನ ಮಧ್ಯೆ ತೀವ್ರ ವಾಗ್ವಾದ ನಡೆದಿದೆ.

ಮಾತಿಗೆ ಮಾತು ಬೆಳೆದು ಕೋಪಗೊಂಡ ರೈತ ಬಸಪ್ಪ, ತಕ್ಷಣವೇ ತಮ್ಮ ಕಾಲಿನಲ್ಲಿದ್ದ ಚಪ್ಪಲಿಯನ್ನು ತೆಗೆದುಕೊಂಡು ಟೈಪಿಸ್ಟ್ ನೀಲಕಂಠ ಅವರಿಗೆ ಎಲ್ಲರ ಎದುರೇ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕಚೇರಿಯಲ್ಲೇ ಸರ್ಕಾರಿ ನೌಕರನ ಮೇಲೆ ರೈತ ಚಪ್ಪಲಿಯಿಂದ ಹೊಡೆದ ಬೆನ್ನಲ್ಲೇ ಬಿಟಿಡಿಎ ಕಚೇರಿಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

 ಪ್ರಸ್ತುತ ಈ ಘಟನೆಗೆ ಸಂಬಂಧಿಸಿದಂತೆ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತ ತಂಡಕ್ಕೆ ೧೯೫ ರನ್‌ಗಳ ಗೆಲುವಿನ ಗುರಿಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಬೇಕು : ಡಿ.ಕೆ.ಶಿವಕುಮಾರ್ ಕೊಟ್ಟ ಸಾಲ ವಾಪಾಸ್ ಕೊಡದ ಕಾರಣ ಕಾಲೇಜು ಫೀಸ್ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆಜಗತ್ತಿನಾದ್ಯಂತ 'ರಿಯಲ್ ಸ್ಪೈಡರ್ ಮ್ಯಾನ್' ಎಂದೇ ಖ್ಯಾತಿ ಪಡೆದಿದ್ದ ಅಲ್ ಖಾಖಾ ಇನ್ನಿಲ್ಲಭೂ ಪರಿಹಾರ ನೀಡದೇ ಸತಾಯಿಸುತ್ತಿದ್ದ ಸರ್ಕಾರಿ ನೌಕರನಿಗೆ ಚಪ್ಪಲಿಯಲ್ಲಿ ಹೊಡೆದ ರೈತಬೆಳಗಾವಿಯಲ್ಲಿ 2 ಕೋಟಿ ವಿಮೆಗಾಗಿ ಹೆಂಡತಿಯಿಂದ ಮಾಜಿ ಸೈನಿಕನ ಕೊಲೆ : ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪ್ರಿಯಕರಛಲವಾದಿ ನಾರಾಯಣಸ್ವಾಮಿ, ಯತ್ನಾಳ್ ದ್ವೇಷ ಭಾಷಣದ ಪಿತಾಮಹರು : ಪ್ರದೀಪ್ ಈಶ್ವರ್ ಕರ್ನಾಟಕದಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ : ಪ್ರಿಯಾಂಕ್ ಖರ್ಗೆ ಎಸ್ ಜಿ ಕೆ ಡಿಫೆನ್ಸ್ ಅಕಾಡೆಮಿಯಿಂದ 160 ಅಗ್ನಿವೀರ ಆಯ್ಕೆ ಯುವಕರನ್ನು ಸನ್ಮಾನಿಸಲಾಯಿತುಇಸ್ಕಾನ್‌ನಲ್ಲಿ ಭವ್ಯ ಶ್ರೀ ರಾಧಾ ಗೋವಿಂದ ಮಂದಿರ ೨೨ಕ್ಕೆ ಪ್ರಾಣಪ್ರತಿಷ್ಠಾ ಮಹೋತ್ಸವ : ಅಗಸ್ಟ ೧೦ರಿಂದ ಸಾರ್ವಜನಿಕ ದರ್ಶನಕ್ಕೆ