ಬೆಳಗಾವಿ: ಶಕ್ತಿ ಯೋಜನೆ ಜಾರಿಗೆ ಬಂದಂದಿನಿಂದ ರಾಜ್ಯಾದ್ಯಂತ ಸಾರಿಗೆ ಬಸ್‌ಗಳಲ್ಲಿ ಸೀಟಿಗಾಗಿ ಪ್ರಯಾಣಿಕರ ನಡುವೆ ಜಗಳ, ಗಲಾಟೆಗಳು ಸಾಮಾನ್ಯ ಎನಿಸಿವೆ.
ಇದೀಗ ಬೆಳಗಾವಿಯಿಂದ ಗುಡ್ಡಾಪುರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನಲ್ಲಿ ಸೀಟಿನ ವಿಚಾರವಾಗಿ ಮಹಿಳೆಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಕೊನೆಗೆ ಹೊಡೆದಾಟದಹಂತಕ್ಕೆ ತಲುಪಿದ ಘಟನೆ ನಡೆದಿದೆ.
ಆರಂಭದಲ್ಲಿ ಸಣ್ಣದಾಗಿ ಶುರುವಾದ ವಾಗ್ವಾದ ಬಳಿಕ ತಾರಕಕ್ಕೇರಿ, ಪರಸ್ಪರ ಬೈದಾಡಿಕೊಂಡು ಹೊಡೆದಾಡಿಕೊಳ್ಳುವ ಮಟ್ಟಕ್ಕೆ ತಲುಪಿತು.
ಈ ವೇಳೆ ಜಗಳ ಬಿಡಿಸಲು ಬಂದ ಬಸ್ ಡ್ರೈವರ್ ಹಾಗೂ ಕಂಡಕ್ಟರ್‌ಗೂ ಕೂಡ ಮಹಿಳೆಯರು ಬಿಡದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಗಲಾಟೆ ತೀವ್ರಗೊಂಡ ಹಿನ್ನೆಲೆಯಲ್ಲಿ ಬಸ್ ಚಾಲಕ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಬಸ್ ಅನ್ನು ರಸ್ತೆ ಪಕ್ಕದಲ್ಲೇ ನಿಲ್ಲಿಸಿದರು.
ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ಇತರೆ ಪ್ರಯಾಣಿಕರು ತಕ್ಷಣ ಮಧ್ಯಪ್ರವೇಶಿಸಿ ಮಹಿಳೆಯರ ನಡುವಿನ ಜಗಳವನ್ನು ಬಿಡಿಸಿ, ವಾತಾವರಣವನ್ನು ತಿಳಿಗೊಳಿಸಿದರು.


