LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಸ್ವಂತ ಹಣದಿಂದ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರ ಪಡೆ : ಸಾರ್ವಜನಿಕರ ಮೆಚ್ಚುಗೆ

Advertisement

ಯಾದಗಿರಿ : ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಬಳಿ ಹಲವು ವರ್ಷಗಳಿಂದ ಹದಗೆಟ್ಟ ಹೆದ್ದಾರಿಯನ್ನು ರಿಪೇರಿ ಮಾಡದೇ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ ಪರಿಣಾಮ ಬೇಸತ್ತ ಯುವಕರು ರಸ್ತೆಯುದ್ದಕ್ಕೂ ನೂರಾರು ಗುಂಡಿಗಳುನ್ನು ತಾವೇ ಸ್ವತಃ ಮುಚ್ಚಿದ್ದಾರೆ.

ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ಉಂಟಾಗಿದ್ದ ಪರಿಣಾಮ ವಾಹನ ಸವಾರರು ಜೀವ ಭಯದಲ್ಲೇ ಸಂಚರಿಸುತ್ತಿದ್ದರು.

ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರು ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ತಮ್ಮ ಸ್ವಂತ ಹಣದಲ್ಲಿ ಈ ಗುಂಡಿಗಳನ್ನು ಯುವಕರಪಡೆ ಮುಚ್ಚಿದೆ. ರಸ್ತಾಪುರ ಯುವಕರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST