Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕೇಂದ್ರಗಳಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆದಿರುವ ಬಗ್ಗೆ ಸ್ಥಳೀಯ ಸುದ್ದಿವಾಹಿನಿ "ಜನತಾ ಧ್ವನಿ" ವರದಿ

Advertisement
ಇಳಕಲ್:-ಭಾರಿ ಪ್ರಮಾಣದ ಈ ಅವ್ಯವಹಾರಗಳಲ್ಲಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಇತರರು ಶಾಮೀಲಾಗಿದ್ದಾರೆ ಎಂದು ವರದಿ ಮಾಡಲಾಗಿದೆ.



ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಗೆ ತೋರಿಸುವುದು, ಅಂಗನವಾಡಿ ಕೇಂದ್ರಗಳಿಗೆ ಬರುವ ಆಹಾರ ಪದಾರ್ಥಗಳನ್ನು ಮಾರಿಕೊಳ್ಳುವುದು  ಸೇರಿದಂತೆ ಹಲವಾರು ಅವ್ಯವಹಾರಗಳು ನಡೆದಿದ್ದರೂ ಇಲಾಖೆಯ ಅಧಿಕಾರಿಗಳು ಮೌನವಾಗಿದ್ದಾರೆ.

ಮುಖ್ಯವಾಗಿ ಅಂಗನವಾಡಿ ಕೇಂದ್ರಗಳನ್ನು ನಡೆಸಲು ಬಾಡಿಗೆ ಪಡೆದಿರುವ ಕಟ್ಟಡಗಳ ಬಾಡಿಗೆ ಪಾವತಿ ನಿಯಮಾನುಸಾರ ಕಟ್ಟಡಗಳ ಮಾಲೀಕರ ಬ್ಯಾಂಕ್ ಖಾತೆಗೆ ಪಾವತಿ ಆಗುತ್ತಿಲ್ಲ.ಅಂಗನವಾಡಿ ಕಾರ್ಯಕರ್ತರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅವುಗಳನ್ನು ನೋಟರಿ ಮಾಡಿಸಿದ್ದಾರೆ. ಬಾಡಿಗೆ ಕಟ್ಟಡಗಳ ಒಪ್ಪಂದದ ಕರಾರು ಪ್ರತಿಗೆ ಕಟ್ಟಡ ಮಾಲೀಕರ ಸಹಿ ಇಲ್ಲ. ಕೆಲವು ಪ್ರಕರಣಗಳಲ್ಲಿ ಕೊಟ್ಟಿ ಸಹಿ ಮಾಡಲಾಗಿದೆ.

ಇಂಥ ಕೊಟ್ಟಿ ಬಾಡಿಗೆ ಕರಾರು ಪತ್ರಗಳನ್ನು ಅಂಗೀಕರಿಸಿ ಮೇಲ್ವಿಚಾರಕರು, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಕಟ್ಟಡಗಳಿಗೆ ಬಾಡಿಗೆ ಪಾವತಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತರ ಈ ಅವ್ಯವಹಾರದಲ್ಲಿ ಅಧಿಕಾರಿಗಳು ಶಾಮಿಲ್ ಆಗಿರುವುದು ಸ್ಪಷ್ಟವಾಗಿದೆ ಎಂದು ವರದಿ ಮಾಡಲಾಗಿದೆ.

ಇಳಕಲ್ ನಗರದ ಅಂಗನವಾಡಿ ಕೇಂದ್ರಗಳು ಸಮಯಾನುಸಾರ ನಡೆಯುತ್ತಿಲ್ಲ. ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಬಾಲ ವಿಕಾಸ ಸಮಿತಿಗಳು ಇಲ್ಲ. ಫಲಾನುಭವಿ ಮಕ್ಕಳಿಗೆ ಮೆನು ಪ್ರಕಾರ ಆಹಾರ ವಿತರಣೆಯಾಗುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರು ಅಂಗನವಾಡಿ ಕೇಂದ್ರಗಳಲ್ಲಿ ಇರುವುದಿಲ್ಲ. ಅಂಗನವಾಡಿ ಕೇಂದ್ರಗಳನ್ನು ಸಮರ್ಪಕವಾಗಿ ನಡೆಸುವಂತೆ ಆಗ್ರಹಗಳು ಕೇಳಿ ಬರುತ್ತಿದ್ದರೂ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ನಿರ್ಲಕ್ಷ್ಯ ಮುಂದುವರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ವರದಿ:- ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ