LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂಗನವಾಡಿ ಕೇಂದ್ರದಲ್ಲಿ ಮಕ್ಕಳನ್ನು ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ

Advertisement
ಯಾದಗಿರಿ : ಯಾದಗಿರಿಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬಳು ಮಕ್ಕಳನ್ನು ಅಂಗನವಾಡಿ ಕೇಂದ್ರದೊಳಗೆ ಕೂಡಿ ಹಾಕಿ ಬೀಗ ಹಾಕಿಕೊಂಡು ಜಮೀನು ಕೆಲಸಕ್ಕೆ ಹೋದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬೂದೂರು ಗ್ರಾಮದಲ್ಲಿ ನಡೆದಿದ್ದು, ಆಕೆಯ ಈ ವರ್ತನೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೂದೂರು ಗ್ರಾಮದ ಅಂಗನವಾಡಿ ಕೇಂದ್ರ-1ರ ಸಹಾಯಕಿ ಸಾವಿತ್ರಮ್ಮ ಎಂಬಾಕೆಯೇ ಕೇಂದ್ರಕ್ಕೆ ಬೀಗ ಹಾಕಿದವಳು. ಮುಖ್ಯ ಸಹಾಯಕಿ ಮಾಸಿಕ ಸಭೆಗೆ ಬೇರೆ ಗ್ರಾಮಕ್ಕೆ ಹೋಗಿದ್ದರಿಂದ, ಸಹಾಯಕಿ ಸಾವಿತ್ರಮ್ಮ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದರು. ಆದರೆ, ಕೆಲ ಸಮಯದ ನಂತರ ಕೊಠಡಿ ಬೀಗ ಹಾಕಿಕೊಂಡು ಜಮೀನು ಕೆಲಸಕ್ಕೆ ಹೋಗಿದ್ದಾರೆ.

ಇತ್ತ ಮಕ್ಕಳು ಅತ್ತು ಕೂಗಾಡಿದ್ದನ್ನು ಆಲಿಸಿದ ಗ್ರಾಮಸ್ಥರು ಕೂಡಲೇ ಮುಖ್ಯ ಸಹಾಯಕಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಮುಖ್ಯ ಸಹಾಯಕಿ ಕೊಠಡಿ ಬೀಗ ತೆರೆದು, ಆತಂಕಗೊಂಡಿದ್ದ ಮಕ್ಕಳನ್ನು ಹೊರಬಿಟ್ಟಿದ್ದಾರೆ. ತಪ್ಪಿಸ್ಥ ಸಹಾಯಕಿ ಸಾವಿತ್ರಮ್ಮ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ