LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ವಿಚ್ಛೇದನ ಸಿಕ್ಕಿದ್ದಕ್ಕೆ 9 ಕಿಲೋಮೀಟರ್‌ ದೀಡ ನಮಸ್ಕಾರ ಹಾಕಿದ ವ್ಯಕ್ತಿ 

Advertisement
ಲಕ್ನೋ: ಸಾಮಾನ್ಯವಾಗಿ ದಾಂಪತ್ಯ ಜೀವನದಲ್ಲಿ ವಿಚ್ಛೇದನ (Divorce) ಸಂಭವಿಸಿದರೆ ಅದು ದುಃಖದ ಸಂಗತಿ ಎಂದು ಪರಿಗಣಿಸಲಾಗುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಕೆಲವರು 'ಡಿವೋರ್ಸ್ ಪಾರ್ಟಿ' ನೀಡಿ ಸಂಭ್ರಮಿಸುವುದನ್ನೂ ನಾವು ನೋಡಿದ್ದೇವೆ.

ಅದರಂತೆ ಉತ್ತರ ಪ್ರದೇಶದ (Uttara Pradesh) ಬಸ್ತಿ ಜಿಲ್ಲೆಯ 25 ವರ್ಷದ ಯುವಕನೋರ್ವ ತನಗೆ ಪತ್ನಿಯಿಂದ ​ಕೋರ್ಟಿನಲ್ಲಿ ವಿಚ್ಛೇದನ ಸಿಕ್ಕಿದ್ದಕ್ಕೆ ದೇವರಿಗೆ ಧನ್ಯವಾದ ಸಲ್ಲಿಸಲು ಬರೋಬ್ಬರಿ 9 ಕಿಲೋಮೀಟರ್‌ಗಳಷ್ಟು ದೂರ ದೀಡ ನಮಸ್ಕಾರ ಹಾಕುವ ಮೂಲಕ ವಿಶಿಷ್ಟವಾಗಿ ಹರಕೆ ತೀರಿಸಿದ್ದಾನೆ.ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಬಸ್ತಿ ಜಿಲ್ಲೆಯ ನರ್ಖೋರಿಯಾ ಗ್ರಾಮದ ಜೋಗೇಶ್ ಎಂಬ ಯುವಕ ಈ ವಿಚಿತ್ರ ಸಾಹಸ ಮಾಡಿದವರು. ನವರಾತ್ರಿಯ ಶುಭ ಸಂದರ್ಭದಲ್ಲಿ ಅವರು ತಮ್ಮ ಗ್ರಾಮದಿಂದ ಸ್ಥಳೀಯ 'ಬೈದಾ ಸಮಯ ಮಾತಾ' ದೇವಸ್ಥಾನದವರೆಗೆ ನೆಲದ ಮೇಲೆ ಮಲಗಿ ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಸಾಗಿದ್ದಾರೆ.

ಬೆಳಿಗ್ಗೆ ಆರಂಭವಾದ ಈ ಕಠಿಣ ಯಾತ್ರೆಯು ಸುಮಾರು 12 ಗಂಟೆಗಳ ಕಾಲ ನಡೆದಿದ್ದು, ಇಡೀ ಹಾದಿಯುದ್ದಕ್ಕೂ ಜೋಗೇಶ್ ಅವರು ಉಪವಾಸವಿದ್ದು 'ಜೈ ಶ್ರೀರಾಮ್' ಮತ್ತು 'ಜೈ ಬಜರಂಗಬಲಿ' ಎಂದು ಘೋಷಣೆ ಕೂಗುತ್ತಾ ದೇವಸ್ಥಾನ ತಲುಪಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ