LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಆನ್‌ಲೈನ್ ಹೂಡಿಕೆ ದೂಖಾ : 1.28 ಕೋಟಿ ರೂ. ಕಳೆದುಕೊಂಡ ವ್ಯಕ್ತಿ

Advertisement

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲ್ಲೂಕಿನ ಶಿವಪುರ ಗ್ರಾಮದ ಕಲ್ಲೇಗೌಡ ಎಂಬುವವರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 1.28 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ.


ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ (Facebook) ಕಂಡ ಒಂದು ಜಾಹೀರಾತಿನ ಲಿಂಕ್ (Link) ಒತ್ತಿದ ಇವರು, ವಂಚಕರು ಸೃಷ್ಟಿಸಿದ್ದ ವಾಟ್ಸಾಪ್ ಗುಂಪಿಗೆ ಸೇರಿಕೊಂಡಿದ್ದರು.


ಆರಂಭದಲ್ಲಿ ಕೇವಲ 60 ಸಾವಿರ ರೂಪಾಯಿ ಹೂಡಿಕೆ ಮಾಡಿದಾಗ, ಅವರಿಗೆ ಸುಮಾರು 17 ಸಾವಿರ ರೂಪಾಯಿ ಲಾಭ ಬಂದಂತೆ ತೋರಿಸಿ ನಂಬಿಕೆ ಹುಟ್ಟಿಸಲಾಗಿತ್ತು.


ಈ ಆಮಿಷಕ್ಕೆ ಒಳಗಾದ ಅವರು, ಹಂತ ಹಂತವಾಗಿ ದೊಡ್ಡ ಮೊತ್ತದ ಹಣವನ್ನು ವರ್ಗಾಯಿಸಿದ್ದರು. ಆದರೆ, ಕೊನೆಗೆ ಲಾಭದ ಹಣವಾಗಲಿ ಅಥವಾ ತಾವು ಹೂಡಿಕೆ ಮಾಡಿದ ಅಸಲಾಗಲಿ ಹಿಂಪಡೆಯಲು ಸಾಧ್ಯವಾಗದಿದ್ದಾಗ ತಮಗೆ ಮೋಸವಾಗಿರುವುದು ದೃಢಪಟ್ಟಿದೆ.


ಸದ್ಯ ಸಂತ್ರಸ್ತ ವ್ಯಕ್ತಿಯು ತಮಗಾದ ವಂಚನೆಯ ಬಗ್ಗೆ ಚಿಕ್ಕಮಗಳೂರಿನ ಸೈಬರ್ ಕ್ರೈಮ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅಪರಿಚಿತ ವಂಚಕರ ಪತ್ತೆಗಾಗಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸಾರ್ವಜನಿಕರು ಅಪರಿಚಿತ ಆನ್‌ಲೈನ್ ಲಿಂಕ್‌ಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ