LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬಿಮ್ಸ್ ನ ವಸತಿ ನಿಲಯದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ 

Advertisement
ಬೆಳಗಾವಿ : ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಬಿಮ್ಸ್ ನ ವಸತಿ ನಿಲಯದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಬಿಮ್ಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿದ್ಯಾರ್ಥಿನಿ ಪ್ರಿಯಾ (27) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.

ಸೋಮವಾರ ಸಂಜೆಯವರೆಗೂ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ತಪಾಸಣೆ ಕುರಿತು ಅಧ್ಯಯನ ಮಾಡಿದ್ದ ಪ್ರಿಯಾ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ದಿನಗಳ ಹಿಂದೆಯೂ ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಭೇಟಿ ನೀಡಿದ ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಪ್ರಿಯಾ ಮಾನಸಿಕ ರೋಗದಿಂದ ಬಳಲುತ್ತಿದ್ದಳು.

ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿದು ಬಂದಿತ್ತು. ಆಕೆ ಅಧಿಕ ಪ್ರಮಾಣದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದು ಬರಲಿದೆ ಎಂದು ಎಂದು ತಿಳಿಸಿದರು‌.

ಎಪಿಎಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ