Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟ್ಯೂಷನ್ ಗೆ ಹೋಗಿದ್ದ ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ 

Advertisement

ಲಕ್ಷ್ಮೇಶ್ವರ: ಟ್ಯೂಷನ್ಗೆ ಹೋಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಅದೇ ಗ್ರಾಮದ ನಿವಾಸಿಗಳಾದ ಅಲ್ಲಾಭಕ್ಷ ಕೊಪ್ಪದ ಮತ್ತು ಆಸಿಫ್ ನಡಾಫ್ ಎಂದು ಗುರುತಿಸಲಾಗಿದೆ. ಟ್ಯೂಷನ್ ಗೆ ತೆರಳಿದ್ದ ಬಾಲಕಿಯನ್ನು ಮಾರ್ಗಮಧ್ಯೆ ತಡೆದ ಆರೋಪಿಗಳು, "ನಿಮ್ಮ ಅಣ್ಣ ಕರೆಯುತ್ತಿದ್ದಾನೆ ಬಾ" ಎಂದು ನಂಬಿಸಿ, ವಾಹನದಲ್ಲಿ ಒತ್ತಾಯಪೂರ್ವಕವಾಗಿ ಅಪಹರಿಸಿಕೊಂಡು ಹೋಗಿದ್ದಾರೆ. ಆನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಬಲಾತ್ಕಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಬಾಲಕಿಯ ತಾಯಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸದ್ಯ ಪೊಲೀಸರು ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಕ್ಷ್ಮೀ ಹೆಬ್ಬಾಳಕರ್ ಗೆ ಎರಡನೇ ಹಂತದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ : ಚನ್ನರಾಜ ಹಟ್ಟಿಹೊಳಿಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ರಾಶ್ಚೇರುವು ನಲ್ಲಿ ಜನಸ್ಪಂದನಾ ಕಾರ್ಯಕ್ರಮ ಮುಂಬೈ ಮಳೆಗೆ ಕೊಚ್ಚಿ ಹೋದ 3 ಸಾವಿರ ಎಲ್‌ಪಿಜಿ ಸಿಲಿಂಡರ್‌ಗಳು : ಮನೆಗೆ ಒಯ್ದ ಜನ ಅಥಣಿ ತಾಲೂಕಿನ ಹಲ್ಯಾಳ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ ಶಾಸಕ ಲಕ್ಷ್ಮಣ ಸವದಿನಾಗಠಾಣ ಮತಕ್ಷೇತ್ರದ ಚಡಚಣ ಬ್ಲಾಕ್ ಕಾಂಗ್ರೆಸ್ ಬಿಎಲ್‌ಎಗಳ ತರಬೇತಿ ಶಿಬಿರ 10 ರೂಪಾಯಿ ನಾಣ್ಯಗಳಿಂದಲೇ ಬರೋಬ್ಬರಿ 1.10 ಲಕ್ಷ ರೂ ಮೌಲ್ಯದ ಬೈಕ್ ಖರೀದಿಸಿದ ವ್ಯಕ್ತಿಬೆಳಗಾವಿ ಗಡಿ ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ನಿರ್ಧಾರಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿ : ಧಾರವಾಡದ 6 ಜನ ಸ್ಥಳದಲ್ಲೇ ಸಾವು ರಾಜ್ಯದ ಜನತೆಗೆ ಶೀಘ್ರವೇ ಇಂದಿರಾ ಕಿಟ್ ವಿತರಣೆ : ಕೆ.ಹೆಚ್. ಮುನಿಯಪ್ಪದಾಖಲೆ ನಿರ್ಮಿಸಿದ ಭಾರತದ ಅರ್ನವ್ ಪಾಪರಕರ