Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈಕೊಟ್ಟ ಪ್ರಿಯಕರ, ಆತ್ಮಹತ್ಯೆ ಮಾಡಿಕೊಂಡ ಮಗಳು : ಮನನೊಂದು ತಾಯಿ ಕೂಡ ಆತ್ಮಹತ್ಯೆ

Advertisement

ಮಂಡ್ಯ: ಮಂಡ್ಯ ಜಿಲ್ಲೆಯಲ್ಲೊಂದು ಮನಕಲಕುವ ಘಟನೆ ನಡೆದಿದೆ. ಪ್ರೀತಿಸಿದ ಯುವಕ ಕೈಕೊಟ್ಟಿದ್ದಕ್ಕೆ ಪುತ್ರಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಮನನೊಂದು ತಾಯಿಗೆ ನೇಣಿಗೆ ಶರಣಾಗಿದ್ದಾರೆ.


ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಲಕ್ಷ್ಮಿ(50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.25 ದಿನಗಳ ಹಿಂದೆ ಅವರ ಪುತ್ರಿ ವಿಜಯಲಕ್ಷ್ಮಿ(21) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.


ಫೆಬ್ರವರಿ 21ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ವಿಜಯಲಕ್ಷ್ಮಿ ಅವರು ಪಕ್ಕದ ಮಾರಸಿಂಗನಹಳ್ಳಿ ನಿವಾಸಿ ಹರಿಕೃಷ್ಣ ಅವರನ್ನು ಒಂದೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆತ ಮೋಸ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.


ಇತ್ತೀಚೆಗೆ ಬೇರೆ ಹುಡುಗಿಯರ ಜೊತೆಗೆ ಹರಿಕೃಷ್ಣ ಸಂಪರ್ಕದಲ್ಲಿದ್ದ. ಈ ಬಗ್ಗೆ ಪ್ರಶ್ನಿಸಿ ವಿಜಯಲಕ್ಷ್ಮಿ ಮದುವೆಗೆ ಪಟ್ಟು ಹಿಡಿದಿದ್ದಳು.


ಮದುವೆಗೆ ನಿರಾಕರಿಸಿ ಅವಾಚ್ಯ ಶಬ್ದಗಳಿಂದ ಹರಿಕೃಷ್ಣ ನಿಂದಿಸಿದ್ದ. ಇದರಿಂದ ಮನನೊಂದು ಮಂಡ್ಯದಲ್ಲಿ ವಿಜಯಲಕ್ಷ್ಮಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.


ಮಂಡ್ಯ ಗ್ರಾಮಾಂತರ ಠಾಣೆಗೆ ವಿಜಯಲಕ್ಷ್ಮಿ ತಂದೆ ದೂರು ನೀಡಿದ್ದರು. ನ್ಯಾಯ ಕೇಳಲು ಹೋಗಿದ್ದವರ ವಿರುದ್ಧವೇ ಪೊಲೀಸರು ದಾಖಲಿಸಿದ್ದರು ಎನ್ನಲಾಗಿದೆ.


ಮಗಳ ಸಾವಿಗೆ ನ್ಯಾಯ ಸಿಕ್ಕಿಲ್ಲವೆಂದು ನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷ್ಮಿ ಅವರ ಶವ ಸಾಗಿಸಲು ಬಿಡದೆ ಕುಟುಂಬದವರು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮಂಡ್ಯ ಗ್ರಾಮಾಂತರ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿ ಹರಿಕೃಷ್ಣ ಮತ್ತು ಕುಟುಂಬದವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ