ಈ ಬಾರಿ ಅದ್ದೂರಿಯಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅಕ್ಟೋಬರ್ 3 ರಿಂದ 12 ರವರೆಗೆ ದಸರಾ ಮಹೋತ್ಸವ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅ.3 ರಿಂದ 12 ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಅಕ್ಟೋಬರ್ 3 ರಂದು ಬೆಳಗ್ಗೆ 9 ಗಂಟೆ 10 ನಿಮಿಷಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ನೆರವೇರಿಸಿ ನಂತರ ದಸರಾ ಉದ್ಘಾಟನೆ ಮಾಡಲಾಗುತ್ತಿದೆ.
ಅ.12 ರ ಮಧ್ಯಾಹ್ನ 12 :10 ಕ್ಕೆ ಜಂಬೂ ಸವಾರಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ದಸರಾ ಉದ್ಘಾಟಕರ ಹೆಸರು ಅಂತಿಮವಾಗಿಲ್ಲ. ಮುಂದೆ ಚರ್ಚೆ ನಡೆಸಿ ಯಾರು ದಸರಾ ಉದ್ಘಾಟಿಸಬೇಕೆಂದು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.

