LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ಕಲ್ಪಿಸಲು ಮನವಿ

Advertisement

ಚಿಂಚೋಳಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಂಗಾಪುರ ತಾಂಡದಲ್ಲಿ ಸುಮಾರು 1100 ಜನಸಂಖ್ಯೆ ಇದ್ದು, ಎರಡು ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಮೊದಲನೇ ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡವಿದ್ದರೆ, ಎರಡನೇ ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡದ ಸೌಲಭ್ಯ ಇಲ್ಲದ ಕಾರಣ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ನಡೆಸಲಾಗುತ್ತಿದೆ. ಎರಡನೇ ಅಂಗನವಾಡಿ ಕೇಂದ್ರದಲ್ಲಿ 27 ಮಕ್ಕಳು ದಾಖಲಾಗಿದ್ದು, ಸ್ವಂತ ಕಟ್ಟಡದ ಕೊರತೆಯಿಂದ ಮಕ್ಕಳಿಗೆ ಹಾಗೂ ಅಂಗನವಾಡಿ ಸಿಬ್ಬಂದಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ನಿರ್ಮಿಸಿಕೊಡಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೀಲಾ ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಮಿತ್ರರು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಲಾಗಿದೆ. ಸಮಸ್ಯೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ಅಂಗನವಾಡಿ ಸಿಬ್ಬಂದಿ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಮುಖಂಡರು, ಕಾರಬಾರಿಗಳು ಹಾಗೂ ಅಡುಗೆ ಸಹಾಯಕಿ ಅಶ್ವಿನಿ ಉಪಸ್ಥಿತರಿದ್ದರು.

ವರದಿ : ಸುನೀಲ್ ಸಲಗರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ ಕೇಂದ್ರದ ಗಿಫ್ಟ್: 6 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅಸ್ತು ಭಾರತಕ್ಕೆ 406 ರನ್ ಗಳ ದೊಡ್ಡ ಮೊತ್ತದ ಗೆಲುವಿನ ಗುರಿ ಇಡಿ ದುರ್ಬಳಕೆ ಮೂಲಕ ದಲಿತ ನಾಯಕರನ್ನು ಹತ್ತಿಕ್ಕುವ ಸಂಚು : ನಾಯ್ಡು ನಾಯಕಭಾಗ್ಯ ಶ್ರೀ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಮಾಡಿ ಸಮಾಜ ಸೇವೆಗೆ ಯುವಕರ ಬೆಂಬಲಸ್ವಂತ ಮೊಮ್ಮಗಳ ಮೇಲೆಯೇ ಅತ್ಯಾ*ಚಾರಕ್ಕೆ ಯತ್ನಿಸಿದ ಅಜ್ಜ! ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ಕಲ್ಪಿಸಲು ಮನವಿಬಿಜೆಪಿ ಅವಧಿಯ ಅನಾಹುತದಿಂದಲೇ ನಮಗೆ ಆರ್ಥಿಕ ಇಲಾಖೆ ಪತ್ರ ಬರೆದಿದೆ : ಡಿ.ಕೆ.ಶಿವಕುಮಾರ್ನೂತನ ಡಿವೈಎಸ್ಪಿ ಅಧಿಕಾರ ಸ್ವೀಕಾರ  ಸನ್ಮಾನಶೀಘ್ರದಲ್ಲೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧಾರ: ಬೈರತಿ ಸುರೇಶ್ದ. ಅಪ್ರಿಕಾ- ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆ ಅಡ್ಡಿ