Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ, ಅರಣ್ಯ ಅಧಿಕಾರಿಗಳೊಂದಿಗೆ ಪರಾಮರ್ಶನ ಸಭೆ : ಅರಣ್ಯ ಒತ್ತುವರಿ ತೆರವುಗೊಳಿಸಿ ವರದಿ ಸಲ್ಲಿಸಲು ಸೂಚನೆ

Advertisement
ರಾಯಚೂರ, ಯಾದಗಿರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಬೀದರ ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶ ವಿಸ್ತರಿಸಿ: ಈಶ್ವರ ಖಂಡ್ರೆ ಸಲಹೆ

ರಾಯಚೂರು : ಅಲ್ಪ ಪ್ರಮಾಣದಲ್ಲಿ ಅರಣ್ಯ ಪ್ರದೇಶ ಹೊಂದಿರುವ ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬಳ್ಳಾರಿ ಹಾಗೂ ಬೀದರ್ ಜಿಲ್ಲೆ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಸಿನೆಟ್ಟು ನೀರುಣಿಸಿ, ಜಿಯೋ ಟ್ಯಾಗ್ ಮಾಡಿ ಸಂರಕ್ಷಣೆ ಮಾಡಬೇಕು
ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರು ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜನವರಿ 27ರ ಸೋಮವಾರ, ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಪರಿಸರ ಮತ್ತು ಅರಣ್ಯ ಅಧಿಕಾರಿಗಳೊಂದಿಗಿನ ಪರಾಮರ್ಶನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಯಾರಾದರು ಅರಣ್ಯ ಪ್ರದೇಶ ಒತ್ತುವರಿ ಮಾಡಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಂಡು, ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮವಹಿಸಬೇಕು. ಕ್ರಮದ ಬಗ್ಗೆ
ಶೀಘ್ರವೇ ವಿವರವಾದ ವರದಿ ಸಲ್ಲಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ‌ನಿರ್ದೇಶನ‌ ನೀಡಿದರು.
ರಾಯಚೂರ, ಯಾದಗಿರಿ, ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೀದರ ಜಿಲ್ಲೆ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಈ ಜಿಲ್ಲೆಗಳಲ್ಲಿ ಇರುವ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆ ಮತ್ತು ಗ್ರಾಮೀಣ ರಸ್ತೆಗಳಲ್ಲಿ ಸಸಿಗಳನ್ನು ನೆಡದೇ ಖಾಲಿ ಬಿಟ್ಟಿರುವುದನ್ನು ಸರಿಯಾಗಿ ಗುರುತಿಸಿ ರಸ್ತೆಯ ಎರಡೂ ಬದಿಯಲ್ಲಿ ಸಸಿಗಳನ್ನು ನೆಟ್ಟು ಬೆಳೆಸಬೇಕು. ಅದಕ್ಕೆ ಈಗಿನಿಂದಲೇ ರಸ್ತೆಗಳನ್ನು ಗುರುತಿಸಿ, ಕಾರ್ಯಯೋಜನೆ ರೂಪಿಸುವಂತೆ ಮತ್ತು ನರ್ಸರಿಗಳಲ್ಲಿ ಎತ್ತರದ ಗಿಡಗಳನ್ನು ಬೆಳೆಸುವಂತೆ ಸಚಿವರಾದ ಈಶ್ವರ್ ಖಂಡ್ರೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಹಂಪನಗೌಡ ಬಾದರ್ಲಿ
ಹಂಪನಗೌಡ ಬಾದರ್ಲಿ, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್, ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
ವರದಿ; ಗಾರಲೆದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ