Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನ ಕೋರಿ ಕೋರ್ಟ್‌ ಮೆಟ್ಟಿಲೇರಿದ್ದ ದಂಪತಿ 

Advertisement

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ (Bigg Boss) ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ.

 ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಖುಷಿ ಖುಷಿಯಿಂದ ಸಂಸಾರ ನಡೆಸುತ್ತಿದ್ದ ಇವರ ಬಾಳಲ್ಲಿ ಯಾವ ಬಿರುಗಾಳಿ ಬೀಸಿತು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು.

ಮದುವೆಯಾದ ಬಳಿಕ ಈ ದಂಪತಿ ಅತ್ಯಂತ ಖುಷಿ ಖುಷಿಯಾಗಿಯೇ ಕಾಲ ಕಳೆದಿದ್ದರು. ಆದರೆ, ಈಗ ಏಕಾಏಕಿ ಬೇರೆ ಆಗಲು ಮುಂದಾಗಿರೋದು ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ಕೋರಿ ಈ ದಂಪತಿ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದ್ದಾರೆ.

ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ವೇಳೆ ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರೂ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಇದೆ. 

ಆದರೆ, ಇಬ್ಬರ ನಡುವಿನ ವಿಚ್ಛೇದನಕ್ಕೆ ನಿಖರವಾದ ಕಾರಣವೇನು ಎಂಬುದನ್ನು ಬಹಿರಂಗಪಡಿಸಲು ಸುಮಂತ್ ನಿರಾಕರಿಸಿದ್ದಾರೆ. ಈಗಾಗಲೇ ಶುಭಾ ಅವರು ಸೋಶಿಯಲ್ ಮೀಡಿಯಾದಿಂದ ಪತಿ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ