LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಸರ್ವೀಸ್ ರೈಫಲ್‌ನಿಂದ ನಾಲ್ವರು ಸಹೋದ್ಯೋಗಿಗಳನ್ನೇ ಕೊಂದ ಯೋಧ 

Advertisement

ಶ್ರೀನಗರ : ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಬಸೋಲಿಯಲ್ಲಿ ಭೀಕರ ಘಟನೆಯೊಂದು ನಡೆದಿದೆ. ಇಲ್ಲಿನ ಸಿಐಎಸ್‌ಎಫ್ ಕ್ಯಾಂಪ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧರೊಬ್ಬರು ತನ್ನ ಸರ್ವೀಸ್ ರೈಫಲ್‌ನಿಂದ ಗುಂಡಿನ ದಾಳಿ ನಡೆಸಿ ನಾಲ್ವರು ಸಹೋದ್ಯೋಗಿಗಳನ್ನು ಹತ್ಯೆ ಮಾಡಿದ್ದಾರೆ.

ಮೃತಪಟ್ಟವರಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಯ ಅಧಿಕಾರಿಯೂ ಸೇರಿದ್ದಾರೆ ಎಂದು ತಿಳಿದುಬಂದಿದೆ.ಆರೋಪಿಯನ್ನು ಅವಧೇಶ್ ಕುಮಾರ್ ಎಂದು ಗುರುತಿಸಲಾಗಿದೆ.

ಘಟನೆ ಡ್ಯೂಟಿ ಬದಲಾಯಿಸುವ ಸಂದರ್ಭದಲ್ಲಿ ನಡೆದಿದ್ದು, ಯೋಧರ ನಡುವೆ ವಾಗ್ವಾದ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ವಾಗ್ವಾದವೇ ಗುಂಡಿನ ದಾಳಿಗೆ ಕಾರಣವೆಂದು ಶಂಕಿಸಲಾಗಿದೆ.

 2009ರ ಬ್ಯಾಚ್‌ನ ಯೋಧ ಅವಧೇಶ್ ಕುಮಾರ್ ಈ ಕೃತ್ಯ ಎಸಗಿದ್ದಾನೆ. ಆರೋಪಿ ಅವಧೇಶ್ ಕುಮಾರ್‌ನನ್ನು ಕೂಡಲೇ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಸಿಐಎಸ್‌ಎಫ್ ಅಧಿಕಾರಿಗಳು ಈ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಸಣ್ಣ ಮಾತಿನ ಚಕಮಕಿಯೇ ಈ ದೊಡ್ಡ ದುರಂತಕ್ಕೆ ಕಾರಣವಾಯಿತೇ ಅಥವಾ ಬೇರೆ ಯಾವುದೇ ಉದ್ದೇಶವಿದೆಯೇ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ. ಈ ಘಟನೆಯು ಸೇನಾ ವಲಯದಲ್ಲಿ ಆತಂಕ ಮೂಡಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ ಕೇಂದ್ರದ ಗಿಫ್ಟ್: 6 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅಸ್ತು ಭಾರತಕ್ಕೆ 406 ರನ್ ಗಳ ದೊಡ್ಡ ಮೊತ್ತದ ಗೆಲುವಿನ ಗುರಿ ಇಡಿ ದುರ್ಬಳಕೆ ಮೂಲಕ ದಲಿತ ನಾಯಕರನ್ನು ಹತ್ತಿಕ್ಕುವ ಸಂಚು : ನಾಯ್ಡು ನಾಯಕಭಾಗ್ಯ ಶ್ರೀ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಮಾಡಿ ಸಮಾಜ ಸೇವೆಗೆ ಯುವಕರ ಬೆಂಬಲಸ್ವಂತ ಮೊಮ್ಮಗಳ ಮೇಲೆಯೇ ಅತ್ಯಾ*ಚಾರಕ್ಕೆ ಯತ್ನಿಸಿದ ಅಜ್ಜ! ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ಕಲ್ಪಿಸಲು ಮನವಿಬಿಜೆಪಿ ಅವಧಿಯ ಅನಾಹುತದಿಂದಲೇ ನಮಗೆ ಆರ್ಥಿಕ ಇಲಾಖೆ ಪತ್ರ ಬರೆದಿದೆ : ಡಿ.ಕೆ.ಶಿವಕುಮಾರ್ನೂತನ ಡಿವೈಎಸ್ಪಿ ಅಧಿಕಾರ ಸ್ವೀಕಾರ  ಸನ್ಮಾನಶೀಘ್ರದಲ್ಲೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧಾರ: ಬೈರತಿ ಸುರೇಶ್ದ. ಅಪ್ರಿಕಾ- ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆ ಅಡ್ಡಿ