Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೇ.79 ಅಂಕ ಬಂದಿದ್ದರೂ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

Advertisement
ಹಾಸನ : ಪಿಯುಸಿ ಪರೀಕ್ಷೆಯಲ್ಲಿ  ಶೇಕಡಾ 79 ಅಂಕ ಬಂದಿದ್ದರೂ ಕಡಿಮೆ ಎಂದು ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ  ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ‌‌.

ಇಲ್ಲಿನ ಶಿಕ್ಷಕ ಪ್ರಕಾಶ್ ಅವರ ಪುತ್ರ 18 ವರ್ಷದ ಮನೋಜ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಫಲಿತಾಂಶ ನೋಡಿ ಬಂದ ಮನೋಜ್ ನಿನ್ನೆ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಮನೋಜ್​ ಅರಸೀಕೆರೆ ನಗರದ ಅನಂತ ಪಿಯು ಕಾಲೇಜಿನಲ್ಲಿ ಪಿಸಿಎಂಬಿ ಸೈನ್ಸ್ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿದ್ದ​. ನಿನ್ನೆ ಪ್ರಕಟವಾದ ಪಿಯು ಫಲಿತಾಂಶದಲ್ಲಿ ಶೇಕಡಾ 79 ಅಂಕ ಬಂದಿತ್ತು. ಕನ್ನಡ-98, ಇಂಗ್ಲೀಷ್- 85, ಫಿಸಿಕ್ಸ್-71, ಕೆಮಿಸ್ಟ್ರಿ- 74, ಮ್ಯಾಥ್ಸ್- 82 ಮತ್ತು ಬಯಾಲಜಿ-64  ಒಟ್ಟು-474 ಅಂಕ ಪಡೆದುಕೊಂಡಿದ್ದ. ಫಲಿತಾಂಶ ನೋಡಿ ಬಂದ ಮನೋಜ್​ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾಲೇಜಿನಲ್ಲಿ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಮನೋಜ್, ಹೆಚ್ಚು ಅಂಕ ಗಳಿರುವ ನೆಚ್ಚಿನ ವಿದ್ಯಾರ್ಥಿಗಳ ಪಟ್ಟಿಯಲ್ಲೂ ಇದ್ದ. ತಾನಾಯಿತು ತನ್ನ ಓದಾಯಿತು ಎನ್ನುವಂತಿದ್ದ ಮನೋಜ್ ಓದುವುದರಲ್ಲಿ ಸದಾ ಟಾಪರ್ ಆಗಿದ್ದ. ಎಸ್​ಎಸ್​ಎಲ್​ಸಿಯಲ್ಲಿ ಶೇಕಡಾ 98 ಅಂಕ ಗಳಿಸಿ ಇಡೀ ತಾಲ್ಲೂಕಿನಲ್ಲಿ ಗಮನ ಸೆಳೆದಿದ್ದ.

ಅದೇ ರೀತಿಯಾಗಿ ಪಿಸಿಎಂಬಿ ಅಭ್ಯಾಸ ಮಾಡಿ ಉತ್ತಮ ಅಂಕಗಳಿಸುವ ತಯಾರಿ ಮಾಡಿದ್ದ. ಹೆಚ್ಚಿನ ಅಂಕ ಪಡೆಯುವ ನಿಟ್ಟಿನಲ್ಲಿ ಸಾಕಷ್ಟು ಪರಿಶ್ರಮ ಕೂಡ ವಹಿಸಿದ್ದ ಮನೋಜ್, ಫಲಿತಾಂಶ ಪ್ರಕಟವಾದಾಗ ಕಡಿಮೆ ಅಂಕ ಬಂದಿದೆ ಎಂದು ಆಘಾತಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವೃತ್ತಿಯಲ್ಲಿ ಶಿಕ್ಷಕರಾಗಿರುವ ಮನೋಜ್ ತಂದೆ ಪ್ರಕಾಶ್, ಮಗನ ಅಭ್ಯಾಸಕ್ಕೆ ಬೆನ್ನೆಲುಬಾಗಿ ನಿಂತಿದ್ದರು. ಆದರೆ ನಿನ್ನೆ ಊಟ ಮಾಡಿ ಕೊಠಡಿ‌ ಸೇರಿಕೊಂಡಿದ್ದ ಮನೋಜ್, ಬೆಳಿಗ್ಗೆ ಎಷ್ಟೊತ್ತಾದರೂ ಹೊರ ಬಂದಿಲ್ಲ. ಏನಾಯ್ತು ಎಂದು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಮಗನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ