Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನ

Advertisement

ದಕ್ಷಿಣ ಕನ್ನಡ: ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದ ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ (19) ಅವರು ಅನಾರೋಗ್ಯದಿಂದ ಬುಧವಾರ (ಜೂನ್ 10) ನಿಧನರಾಗಿದ್ದಾರೆ.

ಸಾಧನೆಯ ಶಿಖರ ಏರಬೇಕಿದ್ದ ಹಸನ್ಮುಖಿ ಯುವತಿಯ ಅಕಾಲಿಕ ಅಗಲಿಕೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಶಿಕ್ಷಕರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.

ಮೃತ ಅಭಿಜ್ಞಾ ಭಟ್ ಅವರು ಸುಳ್ಯದ ಹೆಸರಾಂತ ಕಿವಿ, ಮೂಗು ಮತ್ತು ಗಂಟಲು (ENT) ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿಯಾಗಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದ ಸಾವು: ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಜ್ಞಾ ಭಟ್ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಬುಧವಾರ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಸುಳ್ಯದಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST