Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸ್ಟೆಲ್‌ನಲ್ಲಿ ಮಂಚಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ 

Advertisement

ಗದಗ: ಹಾಸ್ಟೆಲ್‌ನಲ್ಲಿ ಮಂಚಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳ ಶವ ಪತ್ತೆಯಾಗಿರುವ ಘಟನೆ ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಡೆದಿದೆ.

25 ವರ್ಷದ ವೀಣಾ ಹಾನಾಪುರ ಮೃತ ಪದವಿ ವಿದ್ಯಾರ್ಥಿನಿ.ವೀಣಾ ಆರ್‌ಡಿಪಿಆರ್‌ ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ (MPH) ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಈಕೆ ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದವಳು.

ವೀಣಾ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಾರಣ ನೇಣುಬಿಗಿದ ಸ್ಥಿತಿಯಲ್ಲಿ ವೀಣಾ ಶವ ಪತ್ತೆಯಾದಾಗ, ಕಾಲುಗಳು ನೆಲಕ್ಕೆ ತಾಗಿದ್ದವು, ಬಿಗಿದಿರುವ ಬಟ್ಟೆ ಕೂಡ ಮಗಳದ್ದಲ್ಲ. ಅಲ್ಲದೇ ಮುಖಕ್ಕೆ ಗಾಯಗಳಾಗಿವೆ. ಇದರಿಂದ ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಮಗಳ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಲು ಆಗ್ರಹಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST