LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಹಿಳೆಯರಿಗೆ ಸ್ವ ಉದ್ಯೋಗದಲ್ಲಿ ಪ್ರಗತಿ ಹೊಂದಲು ಅಧ್ಯಯನ ಪ್ರವಾಸ ಅಗತ್ಯ: ಸುಧೀರ್ ಹಂಗಳೂರು

Advertisement
ಸಿರುಗುಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಹಿಳಾ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಒಂದು ದಿನದ ಅಧ್ಯಯನ ಪ್ರವಾಸ ಹಮ್ಮಿಕೊಂಡಿದ್ದು, ಈ ದಿನ ಸಿರುಗುಪ್ಪ ತಾಲೂಕಿನ ಯೋಜನಾಧಿಕಾರಿ ಸುಧೀರ ಹಂಗಳೂರು ರವರು ಯೋಜನೆಯ ವಾಹನಕ್ಕೆ ನಗರದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರ ಆಶಯದಂತೆ ನಗರ ಮತ್ತು ಗ್ರಾಮೀಣ ಭಾಗದ ಮಹಿಳೆಯರು ಸ್ವ-ಉದ್ಯೋಗದಲ್ಲಿ ಪ್ರಗತಿ ಹೊಂದಲು ಸ್ವ ಉದ್ಯೋಗ, ಕೃಷಿ, ಜೇನು ಸಾಕಾಣಿಕೆ, ಮನೆಯಲ್ಲಿದ್ದು ಮಾಡಬಹುದಾದ ಇನ್ನಿತರ ಕೆಲಸಗಳ ಬಗ್ಗೆ ಈಗಾಗಲೇ ಯೋಜನೆಯಿಂದ ತರಬೇತಿ ಪಡೆದುಕೊಂಡಿದ್ದಾರೆ.



ಪ್ರಗತಿ ಹೊಂದಿದ ಸದಸ್ಯರ ಯಶೋಗಾಥೆಯನ್ನು ಅಧ್ಯಯನ ನಡೆಸುವುದು ಅದರೊಂದಿಗೆ ಸ್ಥಳೀಯ ಸದಸ್ಯರು ಮಾಡಲಿಚ್ಚಿಸುವ ಕೆಲಸಗಳ ಬಗ್ಗೆ ಅಗತ್ಯ ತರಬೇತಿಗಳನ್ನು ಹಾಗೂ ಆಯಾ ಇಲಾಖೆಯ ಅಡಿಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಅಧ್ಯಯನ ಪ್ರತಿ ವರ್ಷ ನಡೆದಿದೆ. ಒಂದು ದಿನದ ಪ್ರವಾಸವನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಜ್ಞಾನವಿಕಾಸ ಸಮನ್ವಯಾಧಿಕಾರಿಗಳಾದ ಶ್ರೀಮತಿ ಪ್ರಿಯಾ, ವಲಯದ ಮೇಲ್ವಿಚಾರಕಿ ಚಂದ್ರಕಲಾ, ಸೇವಾಪ್ರತಿನಿಧಿಗಳಾದ ಅನಿತಾ, ಲಿಂಗಮ್ಮ ಹಾಗೂ ಮಹಿಳಾ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

ವರದಿ.ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ