Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ

Advertisement

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಇಲ್ಲಿನ ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ.

ಪ್ರಾಥಮಿಕ ವರದಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಾರ್ಖಾನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹಾಗೂ ಸಿದ್ಧಪಡಿಸಿದ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ತಡರಾತ್ರಿ ಕಂಪನಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಯಾದ್ಯಂತ ವ್ಯಾಪಿಸಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ