Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ ನಲ್ಲಿಯೇ ಒಟ್ಟು 118.56 ಲಕ್ಷ ಬಾಕ್ಸ್ ಮದ್ಯ ಮಾರಾಟ : 13 ವರ್ಷಗಳ ದಾಖಲೆ ಪತನ

Advertisement

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ತಿಂಗಳು ಮದ್ಯ ಮಾರಾಟದಲ್ಲಿ ಹೊಸ ಇತಿಹಾಸ ಬರೆದಿದೆ. ಅಬಕಾರಿ ಇಲಾಖೆಯ ಕಳೆದ 13 ವರ್ಷಗಳ ಇತಿಹಾಸದಲ್ಲೇ ತಿಂಗಳೊಂದರಲ್ಲಿ ಇಷ್ಟೊಂದು ಭಾರಿ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿರುವುದು ಇದೇ ಮೊದಲು.

ಏಪ್ರಿಲ್ ತಿಂಗಳಲ್ಲಿ ಒಟ್ಟು 118.56 ಲಕ್ಷ ಬಾಕ್ಸ್ ಮದ್ಯ ಮಾರಾಟವಾಗಿದೆ.

ಐಎಂಎಲ್ (IML): ವಿಸ್ಕಿ, ಬ್ರಾಂಡಿ, ರಮ್, ಜಿನ್ ಸೇರಿದಂತೆ ಒಟ್ಟು 68.17 ಲಕ್ಷ ಬಾಕ್ಸ್ ಐಎಂಎಲ್ ಮದ್ಯ ಮಾರಾಟವಾಗಿದ್ದು, ಕಳೆದ ವರ್ಷಕ್ಕೆ (57.44 ಲಕ್ಷ ಬಾಕ್ಸ್) ಹೋಲಿಸಿದರೆ ಶೇ. 18.68 ರಷ್ಟು ಪ್ರಗತಿ ಕಂಡಿದೆ.

ಬಿಯರ್: ಈ ಬಾರಿ 50.39 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದು, ಕಳೆದ ವರ್ಷದ (41.60 ಲಕ್ಷ ಬಾಕ್ಸ್) ದಾಖಲೆಗಿಂತ ಶೇ. 21.13 ರಷ್ಟು ಏರಿಕೆ ಕಂಡಿದೆ.

ರಾಜಸ್ವ ಸಂಗ್ರಹದಲ್ಲಿ ಭಾರಿ ಏರಿಕೆ:

ಮದ್ಯ ಮಾರಾಟದಿಂದ ಸರ್ಕಾರಕ್ಕೆ ಬರುವ ಆದಾಯದಲ್ಲೂ ಗಣನೀಯ ಹೆಚ್ಚಳ ಕಂಡುಬಂದಿದೆ. 2025ರ ಏಪ್ರಿಲ್ನಲ್ಲಿ ₹2904 ಕೋಟಿ ರಾಜಸ್ವ ಸಂಗ್ರಹವಾಗಿದ್ದರೆ, ಈ ವರ್ಷದ ಏಪ್ರಿಲ್ನಲ್ಲಿ ₹3688 ಕೋಟಿ ರಾಜಸ್ವ ಸಂಗ್ರಹವಾಗಿದ್ದು, ಶೇ. 27 ರಷ್ಟು ಬೆಳವಣಿಗೆ ದಾಖಲಾಗಿದೆ.

ಮಾರಾಟ ಹೆಚ್ಚಳಕ್ಕೆ ಕಾರಣಗಳೇನು?

ನೆರೆ ರಾಜ್ಯಗಳ ಎಲೆಕ್ಷನ್ ಎಫೆಕ್ಟ್: ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕೇರಳ ಮತ್ತು ತಮಿಳುನಾಡು ವಿಧಾನಸಭೆಗೆ ಏಪ್ರಿಲ್ನಲ್ಲಿ ಚುನಾವಣೆ ನಡೆದಿದೆ.

ಈ ರಾಜ್ಯಗಳಲ್ಲಿ ಮತದಾನದ ಮುನ್ನ ಮದ್ಯ ಮಾರಾಟ ನಿಷೇಧಿಸಿದ್ದರಿಂದ, ಗಡಿ ಭಾಗಗಳಲ್ಲಿ ಮದ್ಯದ ಬೇಡಿಕೆ ಹೆಚ್ಚಾಗಿತ್ತು.

ಉಪ ಚುನಾವಣೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯೂ ಮದ್ಯ ಮಾರಾಟದ ಹೆಚ್ಚಳಕ್ಕೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

2013ರಿಂದ ಈಚೆಗೆ ನಡೆದ ಮದ್ಯ ಮಾರಾಟದ ಇತಿಹಾಸದಲ್ಲೇ ಈ ಏಪ್ರಿಲ್ ತಿಂಗಳು ಗರಿಷ್ಠ ಪ್ರಮಾಣದ ಮಾರಾಟವನ್ನು ಕಂಡು ಅಬಕಾರಿ ಇಲಾಖೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಪ್‌ಗೆ ಎಂಟ್ರಿ ಪಡೆದ ಆರ್‌ಸಿಬಿಶಿವಾನಂದ ನೀಲಣ್ಣವರ್ ಪ್ರಕರಣ ಸಿಐಡಿಗೆ ವಹಿಸಲಾಗಿದ್ದು, ತನಿಖೆ ಬಳಿಕ ಎಲ್ಲವೂ ಬಹಿರಂಗ : ಸತೀಶ್ ಜಾರಕಿಹೊಳಿ ಪ್ರೀತಿ ವಿಷಯಕ್ಕೆ 17 ವರ್ಷದ ಮಗಳನ್ನೇ ಕೊಂದ ತಂದೆ ಶಿವಾನಂದ ನೀಲಣ್ಣವರ ವಂಚನೆ ಕೇಸ್ : 4 ಬ್ಯಾಂಕ್ ಖಾತೆಗಳು ಪ್ರೀಜ್, ಕೋಟಿ ಕೋಟಿ ಹಣ ಪತ್ತೆ ಶಾಲೆಯಲ್ಲಿ ಹಾಜರಾತಿ ಹಾಕುವ ವೇಳೆ 'ಎಸ್ ಸರ್' ಬದಲು ಜೈ ಶ್ರೀರಾಮ್ ಹೇಳಿ : ಶಾಸಕ ಯತ್ನಾಳ್ ಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್ನಟ ವಿಜಯ್ ತಮಿಳುನಾಡಿನ ಸಿಎಂ ಆಗಿರುವುದು ನನಗೆ ಅಸೂಯೆ ಇಲ್ಲ : ನಟ ರಜನಿಕಾಂತ್ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ, ಚಿನ್ನದ ಖರೀದಿಯಲ್ಲಿ ಭಾರಿ ಇಳಿಕೆ ಇಂದು ಡಿಸಿ- ಆರ್‌ಆರ್ ಕದನಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್ ಕಿಂಗ್ಸ್