Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Advertisement
ಚಿತ್ರದುರ್ಗ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಪತಿ ಹಾಗೂ ಮನೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಹೊಸದುರ್ಗದ ಗೊರವನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಶ್ರೀ ಮೃತ ಮಹಿಳೆ. ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಗೀತಶ್ರೀಗೆ ಪತಿ ಹಾಗೂ ಆತನ ಮನೆಯವರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ತುಮಕೂರು ಮೂಲದ ಗೀತಶ್ರೀ ಗೊರವನಕಲ್ಲು ಗ್ರಾಮದ ಪ್ರಭಾಕರ್ ಎಂಬಾತನನ್ನು ಆರು ವರ್ಷಗಳ ಹಿಂದೆ ವಿವಾಹವಾಗಿದ್ದಳು. ದಂಪತಿಗೆ ಓರ್ವ ಮಗಳು ಇದ್ದಳು. ಪ್ರಭಾಕರ್ ಖಾಸಗಿ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿದ್ದರೆ, ಗೀತಶ್ರೀ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಳು.

ಇತ್ತೀಚೆಗೆ ಪ್ರಭಾಕರ್ ಹಣಕ್ಕಾಗಿ ಪತ್ನಿಯನ್ನು ಪೀಡಿಸುತ್ತಿದ್ದ. ಇದೇ ವಿಚಾರವಾಗಿ ಜಗಳವಾಡುತ್ತಿದ್ದ. ಮನನೊಂದಿದ್ದ ಗೀತಶ್ರೀ ಕೆಲ ದಿನಗಳ ಕಾಲ ತವರಿಗೆ ಹೋಗಿದ್ದಳು. ಮೂರ್ನಾಲ್ಕು ದಿನಗಳ ಹಿಂದಷ್ಟೇ ಪತಿ ಮನೆಗೆ ವಾಪಾಸ್ ಆಗಿದ್ದಳು.

ಆದರೆ ಈಗ ನೇಣು ಬಿಗಿದ ಸ್ಥಿತಿಯಲ್ಲಿ ಗೀತಶ್ರೀ ಶವ ಪತ್ತೆಯಾಗಿದೆ. ಗೀತಶ್ರೀ ಪೋಷಕರು ಪತಿ ಹಾಗೂ ಮನೆಯವರು ಹತ್ಯೆ ಮಾಡಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪತಿ ಪ್ರಭಾಕರ ನಾಪತ್ತೆಯಾಗಿದ್ದಾನೆ.ಹೊಸದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ