LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಣ,ರಣ ಬಿಸಿಲು: ಕುಸಿದು ಬಿದ್ದು ಯುವಕ ಸಾವು

Advertisement
ಬೀದರ್:  ಬಿಸಿಲಿನ ಝಳಕ್ಕೆ ಕುಸಿದು ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದ ಡಿಗ್ಗಿ ರೋಡ್ ಬಳಿ ನಡೆದಿದೆ.

ಯುಪಿ ಮೂಲದ ಮೊಹ್ಮದ್ ಸಮೀರ್ ಅಹ್ಮದ್ (20) ಸಾವನ್ನಪ್ಪಿದ ದುರ್ದೈವಿ ಯುವಕ. ಗರಿಷ್ಠ ತಾಪಮಾನ ಸಹಿಸಲಾರದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ದಿನ ಯುವಕ ತರಕಾರಿ ತರಲು ಹೋಗಿದ್ದ. ಬಳಿಕ ಮನೆಗೆ ವಾಪಸ್ಸಾಗುವಾಗ ತಲೆ ತಿರುಗಿದಂತಾಗಿದ್ದು, ಕೂಡಲೇ ಸಮೀಪದಲ್ಲಿಯೇ ಇದ್ದ ಮೆಕಾನಿಕ್ ಅಂಗಡಿಯಲ್ಲಿ ನೀರು ಕುಡಿದು ವಿಶ್ರಾಂತಿ ಪಡೆದಿದ್ದ. ಸ್ವಲ್ಪ ಹೊತ್ತಾದ ಮೇಲೆ ಮನೆಗೆ ಮರಳುವಾಗ ಡಿಗ್ಗಿ ಗ್ರಾಮದ ರಸ್ತೆ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಬಿಸಿಲಿನಿಂದಲೇ ಮಗ ಸಾವನ್ನಪ್ಪಿದ್ದಾನೆ ಎಂದು ತಂದೆ ಲಯಿಕ್ ಅಹ್ಮದ್ ದೂರು ನೀಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಮಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ