Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನ್‌ವೆಜ್ ತಿನ್ನುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ದಾರುಣ ಸಾವು 

Advertisement
ಶಿವಮೊಗ್ಗ : ಜಿಲ್ಲೆಯ ಚೆನ್ನಹಳ್ಳಿ ಗ್ರಾಮದಲ್ಲಿ, ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ 21 ವರ್ಷದ ಸಚಿನ್ ಎಂಬ ಯುವಕ ಮೃತಪಟ್ಟಿದ್ದಾನೆ. ನಾನ್‌ವೆಜ್ ತಿನ್ನುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

21 ವರ್ಷದ ಯುವಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ನಾನ್‌ವೆಜ್ ತಿನ್ನುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿ ಯುವಕನ ಜೀವ ಹೋಗಿದೆ ಎಂದು ಹೇಳಲಾಗುತ್ತಿದೆ.

ಏಪ್ರಿಲ್ 17ರಂದು ಚೆನ್ನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ರಾತ್ರಿ ಬರ್ತ್ ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಗ್ರಾಮಸ್ಥರೊಂದಿಗೆ ಸಚಿನ್ ಸಹ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದನು. ಪಾರ್ಟಿಯಲ್ಲಿ ಮಾಂಸದಡುಗೆಯನ್ನು ಸಿದ್ಧಪಡಿಸಲಾಗಿತ್ತು.

ರಾತ್ರಿ ಪಾರ್ಟಿ ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದರು. ಆದ್ರೆ ಸಚಿನ್ ಮಾತ್ರ ನಿರ್ಮಾಣ ಹಂತದ ಕಟ್ಟದಲ್ಲಿಯೇ ಇದ್ದನು ಎಂದು ಹೇಳಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಅಂದ್ರೆ ಏಪ್ರಿಲ್ 18ರಂದು ಕಟ್ಟಡ ಕಾರ್ಮಿಕರು ಆಗಮಿಸಿದಾಗ ಸಚಿನ್ ಶವ ಪತ್ತೆಯಾಗಿದೆ.

ಕೂಡಲೇ ಕಟ್ಟಡ ಕಾರ್ಮಿಕರು ಸಚಿನ್ ಕುಟುಂಬಸ್ಥರಿಗೂ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಶಿಫ್ಟ್ ಮಾಡಿದ್ದಾರೆ. ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿ ಮೃತಪಟ್ಟಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಪ್‌ಗೆ ಎಂಟ್ರಿ ಪಡೆದ ಆರ್‌ಸಿಬಿಶಿವಾನಂದ ನೀಲಣ್ಣವರ್ ಪ್ರಕರಣ ಸಿಐಡಿಗೆ ವಹಿಸಲಾಗಿದ್ದು, ತನಿಖೆ ಬಳಿಕ ಎಲ್ಲವೂ ಬಹಿರಂಗ : ಸತೀಶ್ ಜಾರಕಿಹೊಳಿ ಪ್ರೀತಿ ವಿಷಯಕ್ಕೆ 17 ವರ್ಷದ ಮಗಳನ್ನೇ ಕೊಂದ ತಂದೆ ಶಿವಾನಂದ ನೀಲಣ್ಣವರ ವಂಚನೆ ಕೇಸ್ : 4 ಬ್ಯಾಂಕ್ ಖಾತೆಗಳು ಪ್ರೀಜ್, ಕೋಟಿ ಕೋಟಿ ಹಣ ಪತ್ತೆ ಶಾಲೆಯಲ್ಲಿ ಹಾಜರಾತಿ ಹಾಕುವ ವೇಳೆ 'ಎಸ್ ಸರ್' ಬದಲು ಜೈ ಶ್ರೀರಾಮ್ ಹೇಳಿ : ಶಾಸಕ ಯತ್ನಾಳ್ ಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್ನಟ ವಿಜಯ್ ತಮಿಳುನಾಡಿನ ಸಿಎಂ ಆಗಿರುವುದು ನನಗೆ ಅಸೂಯೆ ಇಲ್ಲ : ನಟ ರಜನಿಕಾಂತ್ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ, ಚಿನ್ನದ ಖರೀದಿಯಲ್ಲಿ ಭಾರಿ ಇಳಿಕೆ ಇಂದು ಡಿಸಿ- ಆರ್‌ಆರ್ ಕದನಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್ ಕಿಂಗ್ಸ್