LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮಾಡೆಲಿಂಗ್ ನಲ್ಲಿ ಗುರುತಿಸಿಕೊಂಡಿದ್ದ ಯುವತಿ ಆತ್ಮಹತ್ಯೆ

Advertisement

ಉಡುಪಿ: ಮಾಡೆಲಿಂಗ್ ನಲ್ಲಿ ಗುರುತಿಸಿಕೊಂಡಿದ್ದ ಕರಾವಳಿ ಭಾಗದ ಯುವತಿಯೊಬ್ಬರು ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ವ್ಯಾಪ್ತಿಯ ಕಲ್ಮಾಡಿಯಲ್ಲಿ ನಡೆದಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರಾಗಿದ್ದ ಮಿಸ್ ಮೊಗವೀರಾ ಖ್ಯಾತಿಯ ಪ್ರೀಲ್ಯಾನ್ಸ್ ಮಾಡೆಲ್ ಕೃತಿ ಬಂಗೇರಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾಡೆಲಿಂಗ್ ಕ್ಷೇತ್ರದಲ್ಲಿ ನೂರಾರು ಕನಸುಗಳನ್ನು ಕಂಡಿದ್ದ 27 ವರ್ಷದ ಕೃತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದುರಂತ ಅಂತ್ಯ ಕಂಡಿದ್ದಾರೆ.

ಕೃತಿ ಮಾಡೆಲಿಂಗ್ ಜೊತೆಗೆ ಉಡುಪಿಯ ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದಳು ಎನ್ನಲಾಗಿದೆ.

ತಾಯಿ ರತ್ನಾ ನಿನ್ನೆ ಕೆಲಸಕ್ಕೆಂದು ಮಲ್ಪೆಗೆ ತೆರಳಿದ್ದರು. ಕೃತಿ ಸಹೋದರಿ ಕೂಡ ಕೆಲಸದ ಕಾರಣ ಉಡುಪಿಗೆ ಹೋಗಿದ್ದರು. 

ಮಧ್ಯಾಹ್ನ ಸುಮಾರು 1 ಗಂಟೆಗೆ ತಾಯಿ ರತ್ನಾ ಮನೆಗೆ ಬಂದಾಗ ಕೃತಿ ತನ್ನ ತಾಯಿಯನ್ನು ಮನೆಯ ಹೊರಗೆ ಕಳುಹಿಸಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದರು. 

ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಅವರು ತಮ್ಮ ಸಹೋದರ ಚಂದ್ರ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿದ್ದಾರೆ. ಬಳಿಕ ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ, ಬೆಡ್‌ ರೂಮ್‌ನಲ್ಲಿ ಫ್ಯಾನ್‌ಗೆ ವೇಲ್ ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕೃತಿ ಶವವಾಗಿ ಪತ್ತೆಯಾಗಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
​ಕಾಯಕವೇ ಕೈಲಾಸವೆಂದ ನಿಸ್ಸ್ವಾರ್ಥ ಸೇವಕ: ಶ್ರೀ ಶಿವಪ್ಪ ತಳವಾರ ಅವರಿಗೆ ಭಾವಪೂರ್ಣ ಶುಭಕೋರಿಕೆಪಕ್ಷ ಶಿಸ್ತಿಗೆ ಸವಾಲು: ಶಿವಾಜಿ ಮೇತ್ರೆ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಉಚ್ಚಾಟನೆಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಗಂಭೀರ ಸ್ಥಿತಿ : ಅವರ ಹುತಾತ್ಮತೆಯ ಸುದ್ದಿ ಶೀಘ್ರಕರ್ನಾಟಕ ಹೈಕೋರ್ಟ್ ಗೆ 6 ನ್ಯಾಯಮೂರ್ತಿಗಳ ನೇಮಕಮುಂದಿನ 7 ವರ್ಷದವರೆಗೂ ಡಿ.ಕೆ ಶಿವಕುಮಾರ್ ಸಿಎಂ : ಲಕ್ಷ್ಮಣ್ ಸವದಿ ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ