LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಿಂದಿ ಕೈಬಿಟ್ಟಿರುವುದು ಸ್ವಾಗತರ್ಹ : ಸಂಜು ಬಡಿಗೇರ

Advertisement
ಚಿಕ್ಕೋಡಿ : ಕರ್ನಾಟಕ ಸರ್ಕಾರದ ಶಿಕ್ಷಣ ಕ್ಷೇತ್ರದಲ್ಲಿ ದ್ವಿಭಾಷೆ ನೀತಿ ಜಾರಿ ಮಾ ಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದಲ್ಲಿ ಹಿಂದಿ ಭಾಷೆಯನ್ನು ಕೈಬಿಟ್ಟಿರೋದು ಸ್ವಾಗತರ್ಹವೆಂದು ತಾಲೂಕ ಕರವೇ ಅಧ್ಯಕ್ಷ ಸಂಜು ಬಡಿಗೇರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀಯುತರು ಮಾತನಾಡಿ ರಾಜ್ಯದಲ್ಲಿ ಕನ್ನಡದ ಮಕ್ಕಳಿಗೆ ಒತ್ತಾಯದ ಹಿಂದಿ ಭಾಷೆ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣ ಕಳೆದು 15 ವರ್ಷಗಳಿಂದ ಸತತವಾಗಿ ಹೋರಾಟ ಮಾಡುತ್ತಾ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆರುತ್ತಾ ಬಂದಿದೆ. ಆ ಹೋರಾಟದ ಪರಿಣಾಮದಿಂದ ಕರವೇಯ ಅನೇಕ ಹೋರಾಟಗಾರರ ಮೇಲೆ ಸಾಕಷ್ಟು ಕೇಸು ಕಟಲೆ ಪ್ರಕರಣಗಳು ದಾಖಲಾಗಿದ್ದು ಅಲ್ಲದೆ ಅನೇಕ ಹೋರಾಟಗಾರರು ಜೈಲುವಾಸವನ್ನು ಕೂಡ ಅನುಭವಿಸಿರುತ್ತಾರೆ.

ಅಲ್ಲದೆ ಕೇಂದ್ರ ಸರ್ಕಾರ ಬಹುತೇಕ ದಕ್ಷಿಣದ ರಾಜ್ಯಗಳಲ್ಲಿ ಹಿಂದಿ ಭಾಷೆಯನ್ನು ಒತ್ತಾಯ ಪೂರ್ವಕವಾಗಿ ಏರಿಕೆ ಹೇಳಿಕೆ ಮಾಡಲು ಹೊರಟಿದ್ದು. ಈದಕ್ಕೆ ವಿರೋಧಿಸಿ ಅದಕ್ಕೆ ತಕ್ಕ ಉತ್ತರ ನೀಡಲು ಪರೀಕ್ಷಾ ಸಂದರ್ಭದಲ್ಲಿ ಹಿಂದಿ ಭಾಷೆ ಪರೀಕ್ಷೆ ವಿರೋಧಿಸಿ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವ ವಿನೂತನ ಹೋರಾಟಕ್ಕೆ ವೇದಿಕೆಯ ಕಾರ್ಯಕರ್ತರು ಮುಂದಾಗಿದ್ದರು. ಆದರೆ ಈಗ ನಮ್ಮ ಕರ್ನಾಟಕ ಘನ ರಾಜ್ಯ ಸರ್ಕಾರ ಇತಿಹಾಸದಲ್ಲಿ ಇದೇ ಮೊದಲು ಬಾರಿಗೆ ಹಿಂದಿ ಭಾಷಾಂಕಗಳನ್ನು ಪರಿಗಣನೆ ಮಾಡದೆ ದ್ವಿಭಾಷಾ ನೀತಿಗೆ ಒಲವು ವ್ಯಕ್ತಪಡಿಸಿರುವುದು ಸ್ವಾಗತರ್ಹವಾಗಿದೆ ರಾಜ್ಯದ ಈ ನಿಲುವಿನ ಜೋತೆ ರಾಜ್ಯದ ಆಡಳಿತರೂಡ ಇತರೆ ಎಲ್ಲಾ ವಲಯದಲ್ಲಿ ಎಲ್ಲಾ ಹಂತದಲ್ಲೂ ಕನ್ನಡ ಭಾಷೆಗೆ ಸೂಕ್ತ ಮುನ್ನಡೆ ಸಿಗುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಬೇಕು ಇಲ್ಲದೆ ಇದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಾರಾಯಣಗೌಡರು ನೇತೃತ್ವದಲ್ಲಿ ರಾಜ್ಯದಲ್ಲಿ ಕನ್ನಡ ಭಾಷೆ ಆಡಳಿತ ಭಾಷೆಯಾಗಿ ಪರಿಣಾಮಕಾರಿಯಾಗಿ ಜಾರಿಯಾಗುವ ನಿಟ್ಟಿನಲ್ಲಿ ಮತ್ತಷ್ಟು ಉಗ್ರ ಹೋರಾಟ ರೂಪಿಸಲಾಗುವುದು ಸರ್ಕಾರ ಇದಕ್ಕೆ ಆಸ್ಪದ ನೀಡದೆ ತಾವುಗಳು ಹೊರಡಿಸಿದ ಸುತ್ತೋಲೆಗಳಲ್ಲಿ ಸ್ಪಷ್ಟಪಡಿಸಿದ್ದನ್ನೆ ಪರಿಣಾಮಕಾರಿಯಾಗಿ ಕಾರ್ಯರೂಪಗೊಳಿಸಿ ಜಾರಿಗೆ ತರಬೇಕೆಂದು ಶ್ರೀ ಸಂಜು ಬಡಿಗೇರವರು ಆಗ್ರಹಿಸಿದರು.

ವರದಿ : ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ